ದಿಲ್ಲಿ ಹಿಂಸಾಚಾರ: ಸಂತ್ರಸ್ತರಿಗೆ ಪರಿಹಾರ ಘೋಷಿಸಿದ ಸಿಎಂ ಕೇಜ್ರಿವಾಲ್

ಹೊಸದಿಲ್ಲಿ, ಫೆ.27: ದಿಲ್ಲಿ ಈಶಾನ್ಯ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಭುಗಿಲೆದ್ದ ಹಿಂಸಾಚಾರದಲ್ಲಿ ಮೃತಪಟ್ಟ ವ್ಯಕ್ತಿಗಳ ಕುಟುಂಬಗಳಿಗೆ ಮತ್ತು ಹಿಂಸಾಚಾರದಲ್ಲಿ ಗಾಯಗೊಂಡವರಿಗೆ ಹಾಗೂ ದೊಂಬಿಯಲ್ಲಿ ಮನೆಗಳನ್ನು ಕಳೆದುಕೊಂಡವರಿಗೆ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪರಿಹಾರ ಘೋಷಿಸಿದ್ದಾರೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂಸಾಚಾರ ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಗಳ ರಕ್ತಸಂಬಂಧಿಗಳಿಗೆ ತಲಾ 1 ಲಕ್ಷ ರೂ. ನಗದು ಪರಿಹಾರವನ್ನು ಘೋಷಿಸಲಾಗಿದೆ. ಇನ್ನು ಘಟನೆಯಲ್ಲಿ ಮೃತಪಟ್ಟ ಅಪ್ರಾಪ್ತರ ಕುಟುಂಬಗಳಿಗೆ ತಲಾ 5ಲಕ್ಷ ರೂ. ಪರಿಹಾರವನ್ನು ಘೋಷಿಸಲಾಗಿದೆ.

ಹಿಂಸಾಚಾರದ ಸಂದರ್ಭದಲ್ಲಿ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾದ ಮನೆಗಳ ಮಾಲಕರಿಗೆ 5ಲಕ್ಷ ರೂ.ನ್ನು ಒದಗಿಸಲಾಗುವುದು ಎಂದು ಕೇಜ್ರವಾಲ್ ಇದೇ ಸಂದರ್ಭದಲ್ಲಿ ತಿಳಿಸಿದರು. ಬಾಡಿಗೆ ಮನೆಗಳಲ್ಲಿದ್ದು ತಮ್ಮ ವಸ್ತುಗಳನ್ನು ಕಳೆದುಕೊಂಡ ಬಾಡಿಗೆದಾರರಿಗೆ ಒಂದು ಲಕ್ಷ ರೂಪಾಯಿ ಪರಿಹಾರವನ್ನು ನೀಡಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಇದೇ ಸಂದರ್ಭದಲ್ಲಿ ತಿಳಿಸಿದರು.

Also Read  ಮಂಗಳೂರು: ಮದರಸ ವಿದ್ಯಾರ್ಥಿ ಮೇಲೆ ಹಲ್ಲೆ ➤ ಪ್ರಕರಣದ ಹಿನ್ನೆಲೆ ಬಹಿರಂಗ

ಹಿಂಸಾಚಾರದಲ್ಲಿ ತಮ್ಮ ಸಾಕು ಪ್ರಾಣಿಗಳನ್ನು ಕಳೆದುಕೊಂಡಂತವರಿಗೆ ಅವರು ಕಳೆದುಕೊಂಡಿರಬಹುದಾದ ಪ್ರತೀ ಪ್ರಾಣಿಗೆ ತಲಾ 5ಸಾವಿರ ರೂ.ನಂತೆ ಪರಿಹಾರ ನೀಡಲಾಗುವುದು. ಇನ್ನು ಆಟೊ ರಿಕ್ಷಾ ಕಳೆದುಕೊಂಡವರಿಗೆ 25 ಸಾವಿರ ಪರಿಹಾರ ಧನವನ್ನು ನೀಡಲಾಗುವುದು ಎಂದು ಅರವಿಂದ್ ಕೇಜ್ರಿವಾಲ್ ತಿಳಿಸಿದರು.

error: Content is protected !!
Scroll to Top