ಕಡಬ: ಆಕ್ಟಿವಾ ಮತ್ತು ಬುಲ್ಲೆಟ್ ನಡುವೆ ಢಿಕ್ಕಿ ➤ ಸವಾರರಿಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಫೆ.28. ರಾಯಲ್ ಎನ್ ಫೀಲ್ಡ್ ಬುಲ್ಲೆಟ್ ಹಾಗೂ ಹೋಂಡಾ ಆಕ್ಟಿವಾ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕುಂಡಾಜೆ ಎಂಬಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ.

ಕಡಬ ಕಡೆಗೆ ತೆರಳುತ್ತಿದ್ದ ಹೋಂಡಾ ಆ್ಯಕ್ಟಿವಾ ಹಾಗೂ ವಿರುದ್ಧ ದಿಕ್ಕಿನಿಂದ ಆಗಮಿಸುತ್ತಿದ್ದ ಬುಲ್ಲೆಟ್ ನಡುವೆ ಕುಂಡಾಜೆಯಲ್ಲಿ ಢಿಕ್ಕಿಯಾಗಿದ್ದು, ಘಟನೆಯಲ್ಲಿ ಸವಾರರಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು 108 ಆಂಬ್ಯುಲೆನ್ಸ್ ಮೂಲಕ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಡಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!

Join the Group

Join WhatsApp Group