ನಾಳೆ (ಮಾ.01) ನೆಲ್ಯಾಡಿಯಲ್ಲಿ ಉಚಿತ ವೈದ್ಯಕೀಯ ಶಿಬಿರ ➤ ದೇರಳಕಟ್ಟೆಯ ಕಣಚೂರು ಆಸ್ಪತ್ರೆಯ ಸಹಯೋಗ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಫೆ.29. ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ನಾಟೆಕಲ್, ಸಮಾನ ಮನಸ್ಕರ ವೇದಿಕೆ, ನೆಲ್ಯಾಡಿ ಮತ್ತು ಬೆಥನಿ ವಿದ್ಯಾಲಯ ನೆಲ್ಯಾಡಿ ಇದರ ಸಹಯೋಗದಲ್ಲಿ ಉಚಿತ ವೈದ್ಯಕೀಯ ಶಿಬಿರವು ಮಾರ್ಚ್ 01 ಭಾನುವಾರದಂದು ಬೆಥನಿ ಶಾಲಾ ವಠಾರದಲ್ಲಿ ನಡೆಯಲಿದೆ.

ಭಾನುವಾರ ಬೆಳಿಗ್ಗೆ 9.30 ರಿಂದ ಆರಂಭಗೊಂಡು ಮಧ್ಯಾಹ್ನ 1.30 ರ ವರೆಗೆ ನಡೆಯಲಿರುವ ಶಿಬಿರದಲ್ಲಿ ವೈದ್ಯಕೀಯ ಶಾಸ್ತ್ರ ತಜ್ಞರು, ಶಸ್ತ್ರಚಿಕಿತ್ಸಾ ತಜ್ಞರು, ಮೂಳೆ ತಜ್ಞರು, ಸ್ತ್ರೀ ರೋಗ ಮತ್ತು ಪ್ರಸೂತಿ ತಜ್ಞರು, ಕಿವಿ, ಮೂಗು, ಗಂಟಲು ತಜ್ಞರು, ಮಕ್ಕಳ ತಜ್ಞರು, ನೇತ್ರ ತಜ್ಞರು ಭಾಗವಹಿಸಲಿದ್ದು, ಉಚಿತ ರಕ್ತ ತಪಾಸಣೆ ಹಾಗೂ ಉಚಿತ ಔಷಧಿ ವಿತರಿಸಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 8970194288, 9481917806, 7353774782 ಸಂಖ್ಯೆಯನ್ನು ಸಂಪರ್ಕಿಸುವಂತೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Also Read  ವಿಶ್ವದ ಅತಿದೊಡ್ಡ ಐಫೋನ್ ಕಾರ್ಖಾನೆಯಲ್ಲಿ ಕೋವಿಡ್ ಲಾಕ್‌ಡೌನ್‌ !

error: Content is protected !!
Scroll to Top