ಕಡಬ: ಬೈಕಿಗೆ ಢಿಕ್ಕಿ ಹೊಡೆದು ಪರಾರಿಯಾದ ಮಿನಿಬಸ್ ➤ ಪಂಚಾಯತ್ ಸದಸ್ಯೆ ಗಂಭೀರ



(ನ್ಯೂಸ್ ಕಡಬ) newskadaba.com ಕಡಬ, ಮಾ.01. ಪ್ಯಾಸೆಂಜರ್ ಟೆಂಪೋವೊಂದು ಬೈಕಿಗೆ ಢಿಕ್ಕಿ ಹೊಡೆದು ಪರಾರಿಯಾಗಿದ್ದರಿಂದ ಬೈಕಿನಲ್ಲಿದ್ದ ಮಹಿಳೆಯೋರ್ವರು ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಚಾಕೋಟೆಕೆರೆ ಎಂಬಲ್ಲಿ ಭಾನುವಾರದಂದು ನಡೆದಿದೆ.





ಮೀನಾಡಿಯಿಂದ ಮರ್ಧಾಳ ಕಡೆಗೆ ತೆರಳುತ್ತಿದ್ದ ಬೈಕಿಗೆ ಹಿಂದಿನಿಂದ ಬಂದ ಪ್ಯಾಸೆಂಜರ್ ಟೆಂಪೋ ಓವರ್ಟೇಕ್ ಮಾಡುವ ಭರದಲ್ಲಿ ಢಿಕ್ಕಿ ಹೊಡೆದು ಪರಾರಿಯಾಗಿದೆ. ಘಟನೆಯಲ್ಲಿ ಮೀನಾಡಿ‌ ನಿವಾಸಿ, ಕುಟ್ರುಪ್ಪಾಡಿ ಪಂಚಾಯತ್ ಸದಸ್ಯೆ ಕುಸುಮಾ ಗಂಭೀರ ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ 108 ಆಂಬ್ಯುಲೆನ್ಸ್ ಮೂಲಕ ಮಂಗಳೂರಿಗೆ ಕರೆದೊಯ್ಯಲಾಗಿದೆ. ಪರಾರಿಯಾಗಿದ್ದ ಟೆಂಪೋವನ್ನು ಮರ್ಧಾಳದಲ್ಲಿ ತಡೆಹಿಡಿಯಲಾಗಿದ್ದು, ಕಡಬ ಪೊಲೀಸರಿಗೆ ಒಪ್ಪಿಸಲಾಗಿದೆ.






 

error: Content is protected !!
Scroll to Top