ಕಡಬ: ಟೆಂಪೋ – ದ್ವಿಚಕ್ರ ವಾಹನದ ನಡುವೆ ಅಪಘಾತ ➤ ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಮಾ.01. ಗೂಡ್ಸ್ ಟೆಂಪೋ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ 102 ನೇ ನೆಕ್ಕಿಲಾಡಿ ಗ್ರಾಮದ ಬೊಳ್ಳೂರು ದೇವಸ್ಥಾನದ ಬಳಿ ಭಾನುವಾರದಂದು ಸಂಭವಿಸಿದೆ.

ಮೃತ ಸವಾರನನ್ನು ರಾಜಸ್ತಾನ ಮೂಲದ ಮೇಘರಾಜ್ ಎಂದು ಗುರುತಿಸಲಾಗಿದೆ. ಬೊಳ್ಳೂರು ದೇವಸ್ಥಾನದಿಂದ ಮರ್ಧಾಳ ಕಡೆಗೆ ತೆರಳುತ್ತಿದ್ದ 407 ಟೆಂಪೋ ಹಾಗೂ ದ್ವಿಚಕ್ರ ವಾಹನದ ನಡುವೆ ಬೊಳ್ಳೂರು ದೇವಸ್ಥಾನದ ಮುಂದಿನ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಟೈಲ್ಸ್ ಹಾಕುವ ಕೆಲಸ ಮಾಡುತ್ತಿದ್ದ ಮೇಘರಾಜ್ ಕಡಬಕ್ಕೆ ತೆರಳಿ ಹಿಂತಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿದ್ದಾರೆ.

Also Read  ಬೆಂಗಳೂರು ಘಟನೆ ಮಾಸುವ ಮುನ್ನವೇ ಬಿ.ಸಿ ರೋಡ್ ನಲ್ಲಿ ಅಂತಹದೇ ಘಟನೆ ➤ ಲಾಕ್‌ಡೌನ್ ಉಲ್ಲಂಘನೆ ಪ್ರಶ್ನಿಸಿದ್ದಕ್ಕೆ ಸರಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ

error: Content is protected !!
Scroll to Top