ಕಡಬ: ಟೆಂಪೋ ಅಪಘಾತ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ➤ ಮರಳು ಖಾಲಿ ಮಾಡಿ ತಂದಿರಿಸಿ ತನಿಖೆಯ ಹಾದಿ ತಪ್ಪಿಸಿದರೇ..?

ಕಡಬ, ಮಾ.01. 407 ದ್ವಿಚಕ್ರ ವಾಹನವೊಂದು ಸ್ಕಿಡ್ ಆಗಿ ಉರುಳಿ ಬಿದ್ದ ವೇಳೆ ಸವಾರನ ತಲೆಯ ಮೇಲೆ 407 ಟೆಂಪೋ ಹರಿದ ಪರಿಣಾಮ ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಡಬ ಠಾಣಾ ವ್ಯಾಪ್ತಿಯ 102 ನೇ ನೆಕ್ಕಿಲಾಡಿ ಗ್ರಾಮದ ಬೊಳ್ಳೂರು ದೇವಸ್ಥಾನದ ಬಳಿ ಭಾನುವಾರದಂದು ಸಂಭವಿಸಿದ್ದು, ಇದೀಗ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ದೊರೆತಿದೆ.

ಮೃತ ಸವಾರನನ್ನು ರಾಜಸ್ತಾನ ಮೂಲದ ಮೇಘರಾಜ್ ಎಂದು ಗುರುತಿಸಲಾಗಿದೆ. ಟೈಲ್ಸ್ ಹಾಕುವ ಕೆಲಸ ಮಾಡುತ್ತಿದ್ದ ಮೇಘರಾಜ್ ಕಡಬಕ್ಕೆ ತೆರಳಿ ಹಿಂತಿರುಗುತ್ತಿದ್ದಾಗ ಬೊಳ್ಳೂರು – ಮಿತ್ತೋಡಿ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಇಳಿಜಾರು ರಸ್ತೆಯ ತಿರುವಿನಲ್ಲಿ ದ್ವಿಚಕ್ರ ವಾಹನ ಸ್ಕಿಡ್ ಆಗಿದ್ದರಿಂದ ಉರುಳಿ ಬಿದ್ದಿದ್ದಾರೆ. ಈ ವೇಳೆ ವಿರುದ್ಧ ದಿಕ್ಕಿನಿಂದ ಆಗಮಿಸುತ್ತಿದ್ದ ಟೆಂಪೋ ಮೇಘರಾಜ್ ತಲೆಯ ಮೇಲೆ ಹರಿದಿದ್ದರಿಂದ ತಲೆ ಜಜ್ಜಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಮೃತಪಟ್ಟ ಮೇಘರಾಜ್ ಸಾವಿಗೆ ಕಾರಣವಾದ ಟೆಂಪೋ ಚಾಲಕನ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ರಾಜಸ್ಥಾನದ ಕಾರ್ಮಿಕರು ಆಗ್ರಹಿಸಿದ್ದಾರೆ. ಕಡಬ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದ ಮುಂಭಾಗದಲ್ಲಿ ಸೇರಿದ್ದ ರಾಜಸ್ಥಾನ ಮೂಲದ ಕಾರ್ಮಿಕರು ತಮ್ಮ ಸಹೋದ್ಯೋಗಿಯ ಸಾವಿಗೆ ಕಾರಣವಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೆಲಕಾಲ ಪ್ರತಿಭಟಿಸಿದರು.

Also Read  ಕಡಬ: ಯುವಮೋರ್ಚಾ ವತಿಯಿಂದ ಉಚಿತ ಆಯುಷ್ಮಾನ್‌ ಕಾರ್ಡ್‌ ಅಭಿಯಾನ

ಸ್ಥಳಕ್ಕೆ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ಹಾಗೂ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆಸಲಾಯಿತು.

ತನಿಖೆಯ ಹಾದಿ ತಪ್ಪಿಸುವ ಯತ್ನ…?

ಅಪಘಾತ ನಡೆದ ಕೂಡಲೇ ಪೊಲೀಸರು ಸ್ಥಳಕ್ಕೆ ತೆರಳುವ ಮೊದಲು ಲಾರಿಯಲ್ಲಿದ್ದ ಮರಳನ್ನು ಅಪಘಾತ ನಡೆದ ಸ್ಥಳದ ಸಮೀಪ ಮನೆಯೊಂದರ ಬಳಿ ಖಾಲಿ ಮಾಡಿ ಲಾರಿಯನ್ನು ಮತ್ತೆ ಅಪಘಾತದ ಸ್ಥಳದಲ್ಲಿ ತಂದಿರಿಸಿದರು ಎಂದು ಸ್ಥಳೀಯರು ದೂರಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ. ಪೊಲೀಸರು ಸ್ಥಳಕ್ಕೆ ಬರುವ ಮೊದಲು ಅಪಘಾತಕ್ಕೆ ಕಾರಣವಾಗಿದ್ದ ವಾಹನವನ್ನು ಸ್ಥಳಾಂತರಿಸಿ ಮತ್ತೆ ತಂದಿರಿಸಿ ಪೊಲೀಸರ ತನಿಖೆಯ ದಿಕ್ಕು ತಪ್ಪಿಸಿದಂತಾಗಿದೆ. ಸ್ಕೂಟರ್ ಸವಾರ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಮೇಲೆ ಆತನ ತಲೆಯ ಮೇಲೆ ಲಾರಿಯ ಚಕ್ರ ಹರಿದಿದೆ ಎಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

Also Read  ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ನಾನೇ: ಡಿ.ಕೆ.ಶಿವಕುಮಾರ್ *► ರಾಗ ಬದಲಿಸಿ ತಣ್ಣಗಾದ ಹಾಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ

error: Content is protected !!
Scroll to Top