ಶಾಂತಿಮೊಗರು: ರಸ್ತೆ ಕಾಮಗಾರಿ ಹಿನ್ನೆಲೆ ➤ ಕಡಬ – ಪುತ್ತೂರು ಬಸ್ ಸಂಚಾರದಲ್ಲಿ ವ್ಯತ್ಯಯ

ಸಾಂದರ್ಭಿಕ ಚಿತ್ರ

(ನ್ಯೂಸ್ ಕಡಬ) newskadaba.com ಕಡಬ, ಮಾ.02. ಕುದ್ಮಾರು ಬಳಿ ರಸ್ತೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಶಾಂತಿಮೊಗರು ಮಾರ್ಗವಾಗಿ ಪುತ್ತೂರಿಗೆ ತೆರಳುವ ಕೆಎಸ್ಸಾರ್ಟಿಸಿ ಬಸ್ ಸಂಚಾರದಲ್ಲಿ ಸೋಮವಾರದಂದು ತಡೆ ಉಂಟಾಗಿದೆ.

ಕೂರ ಜುಮಾ ಮಸೀದಿಯ ಬಳಿ ರಸ್ತೆಯ ಉಬ್ಬುಗಳನ್ನು ತೆರವುಗೊಳಿಸುವ ಕಾಮಗಾರಿ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಪುತ್ತೂರಿನಿಂದ ಶಾಂತಿಮೊಗರು ಮಾರ್ಗವಾಗಿ ಕಡಬ ತೆರಳುವ ಹಾಗೂ ಕಡಬದಿಂದ ಶಾಂತಿಮೊಗರು ಮಾರ್ಗವಾಗಿ ಪುತ್ತೂರಿಗೆ ತೆರಳುವ ಎಲ್ಲಾ ಬಸ್ ಸಂಚಾರದಲ್ಲಿ ವ್ಯತ್ಯಯವುಂಟಾಗಿದೆ.

Scroll to Top