ಕೊರೋನಾ ಭೀತಿ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್

ಮಂಗಳೂರು, ಮಾ.4: ಡೆಡ್ಲಿ ಕೊರೋನಾ ವೈರಸ್ ಇದೀಗ ಭಾರತದಲ್ಲೂ ಆತಂಕ ಸೃಷ್ಟಿಸಿದ್ದು, ಮೂರು ಪ್ರಕರಣಗಳು ದೃಢಪಟ್ಟಿವೆ. ಈ ನಡುವೆ ರಾಜ್ಯದಲ್ಲಿ ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ಕರಾವಳಿಯಲ್ಲಿ ವೈರಸ್ ಬರದಂತೆ ತಡೆಗಟ್ಟಲು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಕ್ರೀನಿಂಗ್ ಯಂತ್ರಗಳನ್ನು ಅಳವಡಿಸಲಾಗಿದೆ. ಕರಾವಳಿಗರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಕುವೈತ್, ಯುಎಇ, ಸೌದಿ, ಓಮನ್, ಬಹರೈನ್‌ಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಅಲ್ಲಿ ಸೋಂಕು ಹಬ್ಬಿರುವ ಕಾರಣ ವಿಮಾನ ನಿಲ್ದಾಣದಲ್ಲಿ ತಪಾಸಣೆ ಮಾಡಲಾಗುತ್ತಿದೆ.

Also Read  ಚಾಲಿ ಪೊಲೀಲು ಖ್ಯಾತ ನಟ ಸುರೇಂದ್ರ ಬಂಟ್ವಾಳ್ ಬರ್ಬರ ಕೊಲೆ

ಇನ್ನು ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳೂರು ಸರಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ಐಸೋಲೇಟರ್ ವಾರ್ಡ್ ನಿರ್ಮಾಣ ಮಾಡಲಾಗಿದೆ. ಕರ್ನಾಟಕ ಗಡಿ ಜಿಲ್ಲೆಗಳಲ್ಲಿ ಕೊರೋನಾ ಕಟ್ಟೆಚ್ಚರ ವಹಿಸಲಾಗಿದ್ದು, ಆಂಧ್ರ, ತೆಲಂಗಾಣ, ಕೇರಳ ಗಡಿಯಲ್ಲಿ ಎಚ್ಚರಿಕೆ ನೀಡಲಾಗಿದೆ.

error: Content is protected !!
Scroll to Top