(ನ್ಯೂಸ್ ಕಡಬ) newskadaba.com ನವದೆಹಲಿ, ಆ.28. ಇಬ್ಬರು ಸಾಧ್ವಿಗಳ ಮೇಲೆ ಮೂರು ವರ್ಷಗಳ ಕಾಲ ನಿರಂತರ ಅತ್ಯಾಚಾರ ನಡೆಸಿರುವ ಪ್ರಕರಣದಲ್ಲಿ ಅಪರಾಧ ಸಾಬೀತಾಗಿರುವ ಹಿನ್ನೆಲೆಯಲ್ಲಿ ಡೇರಾ ಸಚ್ಚಾ ಸೌಧದ ಮುಖ್ಯಸ್ಥ ಗುರ್ಮಿತ್ ಸಿಂಗ್ ಗೆ ಸಿಬಿಐ ವಿಶೇಷ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ರೋಹ್ಟಕ್ ನ ಸುನಾರಿಯಾ ಜೈಲಿನ ಆವರಣದಲ್ಲಿರುವ ಜೈಲು ಸಿಬಿಐನ ವಿಶೇಷ ನ್ಯಾಯಾಲಯದಲ್ಲಿ ಇಂದು ನ್ಯಾಯಾಧೀಶ ಜಗದೀಪ್ ಸಿಂಗ್ ಅವರು ಗುರ್ಮಿತ್ ಸಿಂಗ್ ಶಿಕ್ಷೆಯ ಪ್ರಮಾಣ ನಿರ್ಧರಿಸಲು ಎರಡೂ ಕಡೆಯ ವಕೀಲರ ವಾದವನ್ನು ಆಲಿಸಿದ ಬಳಿಕ ಶಿಕ್ಷೆಯ ಪ್ರಮಾಣ ಪ್ರಕಟಿಸಿದರು. ಪ್ರಾಸಿಕ್ಯೂಷನ್ ಪರ ವಾದವನ್ನು ಎತ್ತಿ ಹಿಡಿದ ನ್ಯಾ. ಜಗದೀಪ್ ಸಿಂಗ್ ದೋಷಿ ಗುರ್ಮಿತ್ ಸಿಂಗ್ ಗೆ ಐಪಿಸಿ ಸೆಕ್ಷನ್ 376(ಅತ್ಯಾಚಾರ) , 506 (ಜೀವ ಬೆದರಿಕೆ) , 511 ರ ಪ್ರಕಾರ ಅಪರಾಧಕ್ಕೆ ಯತ್ನದ ಹಿನ್ನೆಲೆಯಲ್ಲಿ ಗುರ್ಮಿತ್ ಸಿಂಗ್ ಗೆ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ.
ಮೊದಲು ಗುರ್ಮಿತ್ ಪರ ವಕೀಲರಿಗೆ ವಾದ ಮಂಡಿಸಲು ಅವಕಾಶ ನೀಡಲಾಗಿತ್ತು. ” ಗುರ್ಮಿತ್ ವಯಸ್ಸು , ಆರೋಗ್ಯ ಪರಿಗಣಿಸಿ ಕಡಿಮೆ ಶಿಕ್ಷೆ ಕೊಡಿ” ಎಂದು ಗುರ್ಮಿತ್ ಪರ ವಕೀಲ ಎಸ್ ಕೆ ಗಾರ್ಗ್ ನರ್ವಾನ್ ವಾದ ಮಂಡಿಸಿದ್ದರು. ಪ್ರಾಸಿಕ್ಯೂಷನ್ ಪರ ವಕೀಲರು “ಅತ್ಯಾಚಾರ ಪ್ರಕರಣದ ಅಪರಾಧಿ ಗುರ್ಮಿತ್ ಗೆ ಅತೀ ಹೆಚ್ಚಿನ ಪ್ರಮಾಣದ ಶಿಕ್ಷೆ, ಜೀವಾವಧಿ ಶಿಕ್ಷೆ ನೀಡುವಂತೆ ವಾದಿಸಿದರು.