ಸಿಸಿಬಿ ಪೊಲೀಸರ ಯಶಸ್ವಿ ಕಾರ್ಯಾಚರಣೆ ➤ 23 ಲಕ್ಷದ ಗಾಂಜಾ ಸಹಿತ 6 ಮಂದಿ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು. ಮಾ. 04, ಗಾಂಜಾ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಭೇದಿಸಿರುವ ಬೆಂಗಳೂರು ಸಿಸಿಬಿ ಪೊಲೀಸರು 23 ಲಕ್ಷ ರೂ. ವೌಲ್ಯದ 43 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರ ಸಹಿತ ಆರು ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗದ್ದಾರೆ.

ಬಂಧಿತರನ್ನು ಇಂದಿರಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಆಂಧ್ರಪ್ರದೇಶ ಮೂಲದವರಾದ ಕವಿತಾ(23), ಕಿಲ್ಲೊ ಧನುರಾಜೈ (25), ಪಂಗೈ ಮತ್ಯರಾಜು (26) ಮತ್ತು ಮೈಕೋ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಉಪ್ಪಲಪಟ್ಟಿ ಸುಬ್ಬಾರೆಡ್ಡಿ (42), ಬೆಂಗಳೂರಿನ ಅಶೋಕ ನಗರದ ಗೌರವ್(22) ಹಾಗೂ ಬನ್ನೇರುಘಟ್ಟ ರಸ್ತೆಯ ಮಹಮದ್ ಅಮ್ಮರ್ ಶಂಷಾದ್ (25) ಎಂದು ಗುರುಯಿಸಲಾಗಿದೆ.

Also Read  ಕೊರೋನಾ ಭೀತಿ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್

ಆರೋಪಿಗಳು ವಿಶಾಖಪಟ್ಟಣದಿಂದ ಬಸ್ಸಿನಲ್ಲಿ ಅಕ್ರಮವಾಗಿ ಗಾಂಜಾವನ್ನು ನಗರಕ್ಕೆ ತಂದು ಇಂದಿರಾ ನಗರ ಮತ್ತು ಮೈಕೊ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದರು ಎಂದು ಸಿಸಿಬಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

error: Content is protected !!
Scroll to Top