ನಿರ್ಭಯಾ ಅಪರಾಧಿ ಪವನ್ ಸಲ್ಲಿಸಿದ ಕ್ಷಮದಾನ ಅರ್ಜಿ ತಿರಸ್ಕಾರಗೊಳಿಸಿದ ರಾಷ್ಟ್ರಪತಿ

ಹೊಸದಿಲ್ಲಿ, ಮಾ.5: ನಿರ್ಭಯಾ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದಲ್ಲಿ ಅಪರಾಧಿಯಾಗಿರುವ ಪವನ್ ಗುಪ್ತಾ ಕ್ಷಮದಾನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ಬುಧವಾರ ತಿರಸ್ಕಾರ ಮಾಡಿದ್ದಾರೆ. ಈ ಮೂಲಕ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಖಾಯಂ ಆಗಿದೆ.

ನಿರ್ಭಯಾ ಪ್ರಕರಣದ ಅಪರಾಧಿಗಳಲ್ಲಿ ಓರ್ವನಾದ ಪವನ್ ಗುಪ್ತಾ , ಸೋಮವಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಕೋರ್ಟ್ ತಿರಸ್ಕಾರ ಮಾಡಿದೆ. ಆ ಬಳಿಕ ಆತ ಕ್ಷಮದಾನವನ್ನು ಕೋರಿ ರಾಷ್ಟ್ರಪತಿಯವರಿಗೆ ಅರ್ಜಿ ಸಲ್ಲಿಸಿದ್ದ.

ಇಂದು ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ಪವನ್ ಗುಪ್ತಾ ಸಲ್ಲಿಸಿದ್ದ ಕ್ಷಮದಾನ ಅರ್ಜಿಯನ್ನು ತಿರಸ್ಕಾರ ಮಾಡಿದ್ದು ಈ ಮೂಲಕ ಅಪರಾಧಿಗಳಿಗೆ ಗಲ್ಲು ಖಾಯಂ ಆಗಿದೆ. ಮಂಗಳವಾರ ನಡೆಯಲಿದ್ದ ಗಲ್ಲು ಶಿಕ್ಷೆ ಅರ್ಜಿ ಬಾಕಿಯಿದ್ದ ಹಿನ್ನಲೆಯಲ್ಲಿ ಮುಂದೂಡಿದ್ದು ಈಗ ಹೊಸ ಡೆತ್ ವಾರಂಟ್ ಇನ್ನಷ್ಟೇ ಜಾರಿಯಾಗಬೇಕಿದೆ.

Also Read  ಹೊಸ ವಿನ್ಯಾಸದಲ್ಲಿ ಬಿಡುಗಡೆಗೆ ಸಿದ್ಧವಾದ 'ವಂದೇ ಭಾರತ್' ರೈಲು - ಹೊಸ ರೈಲಿನ ಫೋಟೋ ಹಂಚಿಕೊಂಡ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್

error: Content is protected !!
Scroll to Top