ಅಪರಿಚಿತ ವಾಹನ ಢಿಕ್ಕಿ: ಮೂವರು ಮೃತ್ಯು

ಕೋಲಾರ, ಮಾ.5: ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಮೂವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹೊಗಳಗೆರೆ ತಿಂಡ್ಲಿ ರಸ್ತೆಯಲ್ಲಿ ನಡೆದಿದೆ.

ಮೃತರನ್ನು ಗಾಂಧಿನಗರ ನಿವಾಸಿ ಯಲ್ಲಯ್ಯ(25), ವೆಂಕಟೇಶಯ್ಯ(24) ಎಂದು ಗುರುತಿಸಲಾಗಿದೆ.

ಕೂಲಿ ಕೆಲಸಕ್ಕೆಂದು ಬೈಕ್‌ನಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!

Join the Group

Join WhatsApp Group