ಹೊಸದಿಲ್ಲಿ, ಮಾ.6: ಪೌರತ್ವ ತಿದ್ದುಪಡಿ ಕಾಯ್ದೆ ಸಂಬಂಧ ದಿಲ್ಲಿಯಲ್ಲಿ ನಡೆದ ಹಿಂಸಾಚಾರದ ವೇಳೆ ಗುಪ್ತಚರ ಇಲಾಖೆ(ಐಬಿ)ಯ ಅಧಿಕಾರಿಯನ್ನು ಹತ್ಯೆಗೈದ ಆರೋಪ ಎದುರಿಸುತ್ತಿರುವ ಆಮ್ ಆದ್ಮಿ ಪಕ್ಷದ ಕೌನ್ಸಿಲರ್ ತಾಹಿರ್ ಹುಸೈನ್ ನ್ಯಾಯಾಲಯಕ್ಕೆ ಶರಣಾದರು.
ಈಶಾನ್ಯ ದಿಲ್ಲಿಯಲ್ಲಿ ಗುಪ್ತಚರ ಇಲಾಖೆಯ ಅಧಿಕಾರಿ ಅಂಕಿತ್ ಶರ್ಮಾ ಹತ್ಯೆಗೀಡಾಗಿದ್ದರು. ಈ ಆರೋಪದ ಮೇಲೆ ತಾಹಿರ್ ಹುಸೈನ್ ವಿರುದ್ಧ ಕೊಲೆ ಮತ್ತು ಗಲಭೆ ಪ್ರಕರಣ ದಾಖಲಾಗಿತ್ತು. ಅಂಕಿತ್ ಶರ್ಮಾ ಹತ್ಯೆ ಹಿಂದೆ ತಾಹಿರ್ ಕೈವಾಡ ಇದೆ ಎಂದು ತಂದೆ ರವೀಂದ್ರ ಶರ್ಮಾ ಆರೋಪಿಸಿದ್ದರು.
ಈ ಹಿನ್ನೆಲೆಯಲ್ಲಿ ತಾಹಿರ್ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಇನ್ನು ತಾಹಿರ್ ವಿರುದ್ಧ ಕೊಲೆ ಆರೋಪ ವ್ಯಕ್ತವಾದ ಹಿನ್ನೆಲೆಯಲ್ಲಿ ಆತನನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತು ಮಾಡಲಾಗಿತ್ತು.