ಕಾಸರಗೋಡು: ಪಿಸ್ತೂಲ್, ಸಜೀವ ಗುಂಡುಗಳು ಚರಂಡಿಯಲ್ಲಿ ಪತ್ತೆ

ಕಾಸರಗೋಡು, ಮಾ.7: ನಗರದ ರಸ್ತೆ ಬದಿಯ ಚರಂಡಿಯೊಂದರಲ್ಲಿ ಎರಡು ಪಿಸ್ತೂಲ್ ಹಾಗೂ ಆರು ಸಜೀವ ಗುಂಡುಗಳು ಪತ್ತೆಯಾಗಿವೆ. ಕಾಸರಗೋಡು ರೈಲು ನಿಲ್ದಾಣ ಮುಂಭಾಗದ ರಸ್ತೆಬದಿಯ ಚರಂಡಿಯನ್ನು ಸ್ವಚ್ಛತೆಗೊಳಿಸುತ್ತಿದ್ದಾಗ ಪಿಸ್ತೂಲು ಮತ್ತು ಗುಂಡುಗಳು ಪತ್ತೆಯಾಗಿವೆ ಎಂದು ಕಾರ್ಮಿಕರು ತಿಳಿಸಿದ್ದಾರೆ.

ಕೂಡಲೇ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಕಾಸರಗೋಡು ನಗರ ಠಾಣಾ ಪೊಲೀಸರು ರಿವಾಲ್ವರ್ ಮತ್ತು ಗುಂಡುಗಳನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಪತ್ತೆಯಾಗಿರುವ ಪಿಸ್ತೂಲುಗಳು ಮತ್ತು ಗುಂಡುಗಳು ತುಕ್ಕು ಹಿಡಿದಿದೆ.

ವರ್ಷಗಳ ಹಿಂದೆಯೇ ಇದನ್ನು ಇಲ್ಲಿ ಎಸೆದು ಹೋಗಿರಬಹುದೆಂದು ಶಂಕಿಸಲಾಗಿದೆ. ಪಿಸ್ತೂಲು ಮತ್ತು ಗುಂಡುಗಳನ್ನು ಪೊಲೀಸರು ತಪಾಸಣೆಗೆ ಒಳಪಡಿಸಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Also Read  ಪುಲ್ವಾಮಾ ದಾಳಿ ಕುರಿತು ಅವಹೇಳನಕಾರಿ ಪೋಸ್ಟ್➤ ಇಂಜಿನಿಯರಿಂಗ್ ವಿದ್ಯಾರ್ಥಿಗೆ 5 ವರ್ಷ ಜೈಲು ಶಿಕ್ಷೆ!

error: Content is protected !!
Scroll to Top