ಉಪ್ಪಿನಂಗಡಿ: ಕೆಎಸ್ಸಾರ್ಟಿಸಿ ಬಸ್ – ಸ್ವಿಫ್ಟ್ ಕಾರು ನಡುವೆ ಢಿಕ್ಕಿ ➤ ಕಡಬದ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ.08. ಕೆಎಸ್ಸಾರ್ಟಿಸಿ ಬಸ್ ಹಾಗೂ ಮಾರುತಿ ಸುಝುಕಿ ಸ್ವಿಫ್ಟ್ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಕಾರು ಚಾಲಕ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿಯಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ.

ಮೃತನನ್ನು ಕಡಬ ತಾಲೂಕು ಕುಟ್ರುಪ್ಪಾಡಿ ಗ್ರಾಮದ ಮೀನಾಡಿ ನಿವಾಸಿ ಬಾಳಪ್ಪ ಗೌಡ ಎಂಬವರ ಪುತ್ರ ದಯೇಶ್ ಎಂದು ಗುರುತಿಸಲಾಗಿದೆ. ಕಡಬದಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಕಡಬ ಕಡೆಗೆ ಆಗಮಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ನಡುವೆ ಉಪ್ಪಿನಂಗಡಿಯ ಸಿಟಿಲ್ಯಾಂಡ್ ಹೊಟೇಲ್ ಮುಂಭಾಗದಲ್ಲಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಾರು ನಜ್ಜುಗುಜ್ಜಾಗಿದ್ದು, ಕಾರಿನಲ್ಲಿ ಸಿಲುಕಿದ್ದ ದಯೇಶ್ ನನ್ನು ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Scroll to Top