ಪುತ್ತೂರು: ಪೊಲೀಸ್ ಇಲಾಖೆಯ ಬೊಲೆರೋ ಹೆದ್ದಾರಿಯಲ್ಲೇ ಪಲ್ಟಿ

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ.08. ಕಾರು ಹಾಗೂ ಪೊಲೀಸ್ ಇಲಾಖೆಯ ಬೊಲೆರೋ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೊಲೆರೋ ಪಲ್ಟಿಯಾದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ಕೌಡಿಚ್ಚಾರ್ ಸಮೀಪದ ಮಡ್ಯಂಗಳ ಎಂಬಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ದಕ್ಷಿಣ ಕನ್ನಡ ಜಿಲ್ಲಾ ಸೆನ್ ವಿಭಾಗಕ್ಕೆ ಸೇರಿದ ಬೊಲೆರೋ ಸುಳ್ಯ ಕಡೆಗೆ ತೆರಳುತ್ತಿದ್ದ ವೇಳೆ ಕಾರು ನಡುವೆ ಢಿಕ್ಕಿ ಸಂಭವಿಸಿದೆ. ಬೊಲೆರೋ ಹೆದ್ದಾರಿಯಲ್ಲೇ ಪಲ್ಟಿಯಾಗಿ ಬಿದ್ದಿದ್ದು, ಬೊಲೆರೋದಲ್ಲಿದ್ದ ಪೊಲೀಸ್ ಸಿಬ್ಬಂದಿಗಳು ಅಪಾಯದಿಂದ ಪಾರಾಗಿದ್ದಾರೆ.

error: Content is protected !!
Scroll to Top