(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.10, ಕೊರೊನಾ ಆತಂಕದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅವಿಭಜಿತ ದ.ಕ. ಜಿಲ್ಲೆಯ ಎಲ್ಲ ಶಾಲೆಗಳಲ್ಲಿ ಮಾ. 23ರೊಳಗೆ ವಾರ್ಷಿಕ ಪರೀಕ್ಷೆಗಳನ್ನು ಮುಗಿಸಬೇಕು ಎಂಬುದಾಗಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚಿಸಿದೆ. ಜಿಲ್ಲೆಯ ಎಲ್ಲ ಖಾಸಗಿ, ಅನುದಾನಿತ, ಅನುದಾನರಹಿತ ಹಾಗೂ ಸರಕಾರಿ ಶಾಲೆಗಳಿಗೆ ಇದು ಅನ್ವಯವಾಗಲಿದೆ.
ಕೊರೊನಾ ಆತಂಕದಿಂದಾಗಿ ಜಿಲ್ಲೆಯ ಕೆಲವು ಶಾಲೆಗಳ ವಿದ್ಯಾರ್ಥಿಗಳಲ್ಲಿ ಪತ್ರದ ಮೂಲಕ ಪೋಷಕರಿಗೆ ನೀಡುವಂತೆ ತಿಳಿಸಲಾಗಿದ್ದು, ಸಾಧ್ಯವಾದರೆ ಮಾಸ್ಕ್ ತೊಡಿಸಿಯೇ ಮಕ್ಕಳನ್ನು ಶಾಲೆಗೆ ಕಳುಹಿಸಿ, ಜ್ವರ, ಕೆಮ್ಮು, ಶೀತ, ತಲೆನೋವು ಕಂಡುಬಂದರೆ ಅಂತಹ ಮಗುವನ್ನು ಶಾಲೆಗೆ ಕಳುಹಿಸಬೇಡಿ. ಜ್ವರ, ತಲೆನೋವಿನಂತಹ ಯಾವುದೇ ಲಕ್ಷಣ ಕಂಡು ಬಂದರೂ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿ, ತಕ್ಷಣವೇ ಚಿಕಿತ್ಸೆ ಪಡೆದುಕೊಳ್ಳಿ, ಶಾಲೆಯ ಶಿಕ್ಷಕರೊಂದಿಗೆ ನಿರಂತರ ಸಂಪರ್ಕ ಇಟ್ಟುಕೊಳ್ಳಿ ಎಂಬಂತಹ ಹಲವು ಅಂಶಗಳನ್ನು ಪತ್ರದಲ್ಲಿ ಉಲ್ಲೇಖೀಸಲಾಗಿದೆ.