Breaking news ಜ್ಯೋತಿರಾದಿತ್ಯ ಸಿಂಧಿಯಾ ಕಾಂಗ್ರೆಸ್‌ಗೆ ಗುಡ್ ಬೈ

ಹೊಸದಿಲ್ಲಿ, ಮಾ.10: ಮಧ್ಯಪ್ರದೇಶ ಕಾಂಗ್ರೆಸ್‌ನ ಪ್ರಭಾವಿ ಯುವ ಕಾಂಗ್ರೆಸ್ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಅವರು ಕಾಂಗ್ರೆಸ್ ಪಕ್ಷದಲ್ಲಿನ ತನ್ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಸಿಂಧಿಯಾ ಅವರು ತಮ್ಮ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂ‍ಧಿ ಅವರಿಗೆ ಕಳುಹಿಸಿಕೊಟ್ಟಿದ್ದಾರೆ.

ಹೊಸದಿಲ್ಲಿಯಲ್ಲಿ ಇಂದು ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಬೆನ್ನಲ್ಲೇ ಈ ಅಚ್ಚರಿಯ ಬೆಳವಣಿಗೆ ನಡೆದಿದೆ.

ಜ್ಯೋತಿರಾದಿತ್ಯ ಸಿಂಧಿಯಾ ಅವರ ಈ ಅಚ್ಚರಿಯ ನಡೆ ರಾಷ್ಟ್ರ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದು, ರಾಹುಲ್ ಗಾಂಧಿ ನಿಕಟವರ್ತಿಯಾಗಿದ್ದ ಜ್ಯೋತಿರಾದಿತ್ಯ ಸಿಂಧಿಯಾ ಅವರು ಇದೀಗ ಭಾರತೀಯ ಜನತಾ ಪಕ್ಷವನ್ನು ಸೇರಲಿದ್ದಾರೆಯೇ ಎಂಬ ಕುತೂಹಲ ಉಂಟಾಗಿದೆ.

Also Read  ಸಿಎಂ ಕಾರ್ಯಕ್ರಮದಲ್ಲಿ ಬಿರಿಯಾನಿ ಸೇವಿಸಿದ 145 ಮಂದಿ ಅಸ್ವಸ್ಥ

error: Content is protected !!
Scroll to Top