ಕಡಬ: ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಮಲಗಿದ್ದ ಚಾಲಕ ಮೃತ್ಯು ► ಹೃದಯಾಘಾತದ ಶಂಕೆ

(ನ್ಯೂಸ್ ಕಡಬ) newskadaba.com ಕಡಬ, ಮಾ.11. ಕೆಎಸ್ಸಾರ್ಟಿಸಿ ಬಸ್ ಚಾಲಕರೋರ್ವರ ಮೃತದೇಹವೊಂದು ಬಸ್ಸಿನಲ್ಲಿ ಮುಗ್ಗರಿಸಿ ಕುಳಿತ ಸ್ಥಿತಿಯಲ್ಲಿ ಕಂಡುಬಂದಿದ್ದು, ಹೃದಯಾಘಾತದಿಂದ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ.

ಮೃತ ಚಾಲಕನನ್ನು ಬೀದರ್ ನಿವಾಸಿ ರೇವಣ್ಣಪ್ಪ ಎಂದು ಗುರುತಿಸಲಾಗಿದೆ. ಪುತ್ತೂರಿನಿಂದ ಮಂಗಳವಾರ ಸಂಜೆ ಕಡಬಕ್ಕೆ ಆಗಮಿಸಿದ ಬಸ್ಸನ್ನು ಕಡಬದ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ಸಮೀಪ ಹೆದ್ದಾರಿಯ ಪಕ್ಕದಲ್ಲಿ ರಾತ್ರಿ ನಿಲುಗಡೆಗೊಳಿಸಲಾಗಿದ್ದು, ಬೆಳಿಗ್ಗೆ ಶಾಂತಿಮೊಗರು ಮಾರ್ಗವಾಗಿ ಪುತ್ತೂರಿಗೆ ತೆರಳಬೇಕಿತ್ತು‌. ಬೆಳಿಗ್ಗೆ ನಿರ್ವಾಹಕ ಎದ್ದು ಚಾಲಕನನ್ನು ಕರೆಯಲೆಂದು ನೋಡಿದಾಗ ಚಾಲಕ ಮುಗ್ಗರಿಸಿ ಬಿದ್ದು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.

Also Read  ಪ್ರಿಯಕರನ ಬ್ಲ್ಯಾಕ್‌ಮೇಲ್‌ಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ.! 

error: Content is protected !!
Scroll to Top