ಭಾರತದಲ್ಲಿ ಕೊರೋನ ಪೀಡಿತರ 62ಕ್ಕೆ ಏರಿಕೆ

ಹೊಸದಿಲ್ಲಿ, ಮಾ.11: ಭಾರತದಲ್ಲಿ ದಿನೇ ದಿನೇ ಕೊರೋನ ಭೀತಿ ಹೆಚ್ಚಾಗುತ್ತಲೇ ಇದ್ದು, ಮತ್ತೆ 14 ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ. ಈ ಪೈಕಿ 8 ಪ್ರಕರಣಗಳು ಕೇರಳದಲ್ಲಿ, ಕರ್ನಾಟಕದಲ್ಲಿ 3 ಹಾಗೂ ಮಹಾರಾಷ್ಟ್ರದ ಪುಣೆಯಲ್ಲಿ 3 ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ದೇಶದಲ್ಲಿ ಕೊರೋನ ಪೀಡಿತರ ಸಂಖ್ಯೆ 62ಕ್ಕೆ ಏರಿಕೆಯಾಗಿದೆ.

ಒಂದೇ ದಿನ ಇಷ್ಟು ದೊಡ್ಡ ಪ್ರಮಾಣದಲ್ಲಿ ಸೋಂಕು ಪೀಡಿತರ ಸಂಖ್ಯೆ ಹೆಚ್ಚಾಗಿರುವುದು ಸಹಜವಾಗಿಯೇ ದೇಶದಾದ್ಯಂತ, ಅದರಲ್ಲೂ ದಕ್ಷಿಣ ಭಾರತದ ರಾಜ್ಯಗಳಲ್ಲಿ ಆತಂಕವನ್ನು ಹುಟ್ಟುಹಾಕಿದೆ.

ಮಂಗಳವಾರ 8 ಹೊಸ ಪ್ರಕರಣ ಬೆಳಕಿಗೆ ಬರುವುದರೊಂದಿಗೆ ಕೇರಳದಲ್ಲಿ ಈ ವರೆಗೆ ಒಟ್ಟು 14 ಪ್ರಕರಣಗಳು ಬೆಳಕಿಗೆ ಬಂದಂತೆ ಆಗಿದೆ. ಈ ಪೈಕಿ ಮೊದಲ ಮೂರು ರೋಗಿಗಳು ಗುಣಮುಖರಾಗಿ ಮನೆಗೆ ತೆರಳಿದ್ದು, ಉಳಿದವರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕೇರಳ ಸರ್ಕಾರ ಹಲವು ನಿಯಂತ್ರಣ ಕ್ರಮಗಳನ್ನು ಘೋಷಿಸಿದೆ.

Also Read  12 ಕಿ.ಮೀ. ದೂರ ಓಡಿ, ಕೊಲೆ ಆರೋಪಿ ಪತ್ತೆ ಮಾಡಿದ ಪೊಲೀಸ್ ಸ್ನೀಫರ್ ಡಾಗ್!

error: Content is protected !!
Scroll to Top