ರಾಜ್ಯದಲ್ಲಿ ಕೊರೋನ ಪೀಡಿತರ ಸಂಖ್ಯೆ ಐದಕ್ಕೇರಿಕೆ

ಬೆಂಗಳೂರು, ಮಾ.13: ರಾಜ್ಯದಲ್ಲಿ ಮತ್ತೊಂದು ವ್ಯಕ್ತಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ ಐದಕ್ಕೇರಿದೆ. ಗ್ರೀಸ್‌ನಿಂದ ಬೆಂಗಳೂರಿಗೆ ಆಗಮಿಸಿದ 26 ವರ್ಷದ ಯುವಕನಲ್ಲಿ ಕೊರೋನ ಪಾಸಿಟಿವ್ ಕಂಡುಬಂದಿದೆ. ಯುವಕನ ಆರೋಗ್ಯ ಸ್ಥಿರವಾಗಿದ್ದು, ಆಸ್ಪತ್ರೆಯಲ್ಲಿ ನಿಗಾ ವಹಿಸಲಾಗಿದೆ ಎಂದು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.


1,220 ಮಂದಿಯನ್ನು ಇವತ್ತಿನವರೆಗೂ ನಿಗಾ ಇಡಲಾಗಿದ್ದು, ಈ ಪೈಕಿ 292 ಮಂದಿ ಕಳೆದ 28 ದಿನಗಳಿಂದ ನಿಗಾದಲ್ಲಿದ್ದಾರೆ. 906 ಮಂದಿ ಮನೆಯಲ್ಲಿದ್ದರೆ 18 ಮಂದಿ ಆಸ್ಪತ್ರೆಯ ನಿಗಾದಲ್ಲಿದ್ದಾರೆ ಎಂದು ತಿಳಿಸಿದೆ.

Also Read  ನಿಯಂತ್ರಣ ತಪ್ಪಿ 50 ಅಡಿ ಆಳದ ಕಮರಿಗೆ ಉರುಳಿದ ಬಸ್ ➤ ಐವರು ಮೃತ್ಯು..!

error: Content is protected !!
Scroll to Top