ಕರ್ನಾಟಕದಲ್ಲಿ ಕೊರೋನಾ ಎಫೆಕ್ಟ್ ➤ ಇಂದಿನಿಂದ ರಾಜ್ಯದ ಕೆಲವೆಡೆ ಎಲ್ಲಾ ಪ್ರಾಥಮಿಕ ಶಾಲೆಗಳಿಗೆ ರಜೆ



(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ.11. ಚೀನಾ ದೇಶದಿಂದ ಆರಂಭಗೊಂಡ ಕೊರೋನಾ ವೈರಸ್‌ ಜಗತ್ತಿನ ವಿವಿಧೆಡೆ ವ್ಯಾಪಿಸಿದ್ದು, ಕರ್ನಾಟಕದಲ್ಲೂ ಕಂಡುಬಂದ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಎಲ್ಲಾ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.





ಗುರುವಾರದಂದು ರಾಜ್ಯದ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಗಿದ್ದು, ಬಿಬಿಎಂಪಿ, ಬೆಂಗಳೂರು ನಗರ ಜಿಲ್ಲೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿನ ಎಲ್ಲಾ ಪ್ರಾಥಮಿಕ ಶಾಲೆಗಳಿಗೆ ಮುಂದಿನ ಆದೇಶದವರೆಗೆ ಕೊರೋನಾ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಟ್ವೀಟ್ ಮೂಲಕ ತಿಳಿಸಿದ್ದಾರೆ.






error: Content is protected !!
Scroll to Top