ಕೊರೋನ ಮುನ್ನೆಚ್ಚರಿಕೆ: 7, 8, 9 ತರಗತಿಗಳ ಪರೀಕ್ಷೆ ಮುಂದೂಡಿಕೆ: ಸಚಿವ ಸುರೇಶ್ ಕುಮಾರ್

ಬೆಂಗಳೂರು, ಮಾ.15: ಕೊರೋನ ವೈರಸ್ ವ್ಯಾಪಕವಾಗಿ ಹರಡುವುದನ್ನು ತಡೆಗಟ್ಟುವುದಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯ ಸರಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇದೀಗ 7ರಿಂದ 9ನೇ ತರಗತಿಯವರೆಗಿನ ಪರೀಕ್ಷೆಯನ್ನು ಮುಂದೂಡಿದೆ.

ಒಂದು ವಾರ ಎಲ್ಲಾ ಸಾರ್ವಜನಿಕ ಕಾರ್ಯಕ್ರಮಗಳು, ಸಭೆ, ಸಮಾರಂಭಗಳು, ಮಾಲ್, ಥಿಯೇಟರ್‌ಗಳಿಗೆ ಬಂದ್ ಮಾಡಿ ಆದೇಶ ಹೊರಡಿಸಿದ್ದ ರಾಜ್ಯ ಸರಕಾರ ಮುನ್ನೆಚ್ಚರಿಕೆ ಕ್ರಮವಾಗಿ 1ರಿಂದ 6ನೇ ತರಗತಿಯವರೆಗಿನ ವಾರ್ಷಿಕ ಪರೀಕ್ಷೆಯನ್ನು ರದ್ದುಗೊಳಿಸಿ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿತ್ತು. ಇದೀಗ 7ರಿಂದ 9ನೇ ತರಗತಿಯವರೆಗಿನ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಯನ್ನು ಮಾರ್ಚ್ 31ರವರೆಗೆ ಮುಂದೂಡಿ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ. 6ನೇ ತರಗತಿವರೆಗಿನ ಮಕ್ಕಳಿಗೆ ಪರೀಕ್ಷೆ ರದ್ದುಗೊಳಿಸಿದ್ದಾಗ ತಮ್ಮ ಮಕ್ಕಳ ಮೇಲೆ ಏಕೆ ಕಾಳಜಿಯಿಲ್ಲ ಎಂದು 7ನೇ ತರಗತಿ ನಂತರದ ವಿದ್ಯಾರ್ಥಿಗಳ ಪೋಷಕರು ಸರ್ಕಾರವನ್ನು ಪ್ರಶ್ನೆ ಮಾಡಿದ್ದರು. ಈ ಸಂಬಂಧ ಸರ್ಕಾರ ಸುತ್ತೋಲೆ ಹೊರಡಿಸಿದ್ದು, 7ರಿಂದ 9ನೇ ತರಗತಿಯವರೆಗೆ ವಿದ್ಯಾರ್ಥಗಳ ಪರೀಕ್ಷೆಯನ್ನು ಈ ತಿಂಗಳ ಅಂತ್ಯದವರೆಗೆ ಮುಂದೂಡಲಾಗಿದೆ.

Also Read  ಬೆಳ್ತಂಗಡಿ : ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಅಲ್ಲಿಯವರೆಗೆ ಈ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಸಿದ್ದತಾ ರಜೆಯನ್ನು ಘೋಷಿಸಿದ್ದು ಸದರಿ ತರಗತಿಗಳ ಪರೀಕ್ಷಾ ವೇಳಾ ಪಟ್ಟಿಯನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು. 10ನೇ ತರಗತಿಯ ಪರೀಕ್ಷಾ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಕರ ಪ್ರಕಟನೆ ತಿಳಿಸಿದೆ.

Also Read  ಕರ್ನಾಟಕದಲ್ಲೇ ಮೊದಲ ಬಾರಿ ಅರಣ್ಯದಲ್ಲಿ ಪಕ್ಷಿ ಗಣತಿ!

error: Content is protected !!
Scroll to Top