ಚಾಲಕನ ನಿಯಂತ್ರಣ ತಪ್ಪಿವಿರುದ್ದ ದಿಕ್ಕಿಗೆ ಚಲಿಸಿದ ಲಾರಿ ► ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕಡಬ, ಆ.29. ಸುಬ್ರಹ್ಮಣ್ಯ ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ತಿರುವಿನಲ್ಲಿ ಲಾರಿಯೊಂದು ಚರಂಡಿಗೆ ಇಳಿದ ಘಟನೆ ಮಂಗಳವಾರ ಬೆಳಗ್ಗಿನ ಜಾವ ನಡೆದಿದೆ.

ತಮಿಳುನಾಡು ನೋಂದಣಿಯ ಲಾರಿ ಚಾಲಕನ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನ ಚರಂಡಿಗೆ ಇಳಿದಿದ್ದು, ಬಲಭಾಗ ಜಖಂಗೊಂಡಿದೆ. ಲಾರಿಯಲ್ಲಿ ಚಾಲಕ ಹಾಗೂ ಕ್ಲೀನರ್ ಇದ್ದು, ಅಪಾಯದಿಂದ ಪಾರಾಗಿದ್ದಾರೆ.

Scroll to Top