ಬಹುಮತ ಸಾಬೀತುಪಡಿಸುವಂತೆ ಸುಪ್ರೀಂ ಮೆಟ್ಟಿಲೇರಿದ ಬಿಜೆಪಿ

ಹೊಸದಿಲ್ಲಿ, ಮಾ.16: ಮಧ್ಯಪ್ರದೇಶ ವಿಧಾನಸಭೆ ಸ್ಪೀಕರ್ ಎನ್.ಪಿ. ಪ್ರಜಾಪತಿ ಸೋಮವಾರ ಬಜೆಟ್ ಅಧಿವೇಶನದ ಕಲಾಪವನ್ನು ಮಾರ್ಚ್ 26ರವರೆಗೆ ಮುಂದೂಡಿದ್ದು, ಮುಖ್ಯಮಂತ್ರಿ ಕಮಲ್ ನಾಥ್ ಬಹುಮತ ಸಾಬೀತು ಪರೀಕ್ಷೆಯಿಂದ ತಾತ್ಕಾಲಿಕವಾಗಿ ನಿರಾಳತೆ ಪಡೆದಂತಾಗಿತ್ತು. ಈ ಮಧ್ಯೆ ಬಿಜೆಪಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.

ಮಧ್ಯಪ್ರದೇಶ ವಿಧಾನಸಭೆಯಲ್ಲಿ ಎರಡು ದಿನದೊಳಗೆ ಮುಖ್ಯಮಂತ್ರಿ ಕಮಲ್ ನಾಥ್ ಬಹುಮತ ಸಾಬೀತುಪಡಿಸುವಂತೆ ನಿರ್ದೇಶನ ನೀಡಬೇಕೆಂದು ಕೋರಿ ಬಿಜೆಪಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದು, ಮಂಗಳವಾರ ಅರ್ಜಿ ವಿಚಾರಣೆ ನಡೆಸುವುದಾಗಿ ಹೇಳಿದೆ.

ರಾಜ್ಯಪಾಲರ ಆದೇಶ ಧಿಕ್ಕರಿಸಿ ಬಹುಮತ ಸಾಬೀತಿಗೆ ಅವಕಾಶ ನೀಡದೆ ಕಲಾಪ ಮುಂದೂಡಿರುವ ಸ್ಪೀಕರ್ ಪ್ರಜಾಪತಿ ಕ್ರಮದ ವಿರುದ್ಧ ಬಿಜೆಪಿ ಶಾಸಕರು ಮಧ್ಯಪ್ರದೇಶ ವಿಧಾನಸಭೆ ಹೊರಗೆ ಪ್ರತಿಭಟನೆ ನಡೆಸಿದರು.

Also Read  ಭಾರತೀಯ ರೈಲ್ವೇ ಇಲಾಖೆಯಲ್ಲಿ TTE ಹುದ್ದೆ - ಅರ್ಜಿ ಆಹ್ವಾನ

ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಪಕ್ಷದ ಶಾಸಕರ ಜೊತೆ ರಾಜಭವನಕ್ಕೆ ತೆರಳಿದ್ದು, ರಾಜ್ಯಪಾಲರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಗವರ್ನರ್ ಲಾಲ್ಜಿ ಟಂಡನ್ ಅವರ ಸಮ್ಮುಖದಲ್ಲಿ ಬಿಜೆಪಿಯ ಎಲ್ಲಾ 106 ಶಾಸಕರ ಪರೇಡ್ ನಡೆಸಿ, ತಮಗೆ ಬಹುಮತ ಇದೆ ಎಂದು ಮನವರಿಕೆ ಮಾಡಿರುವುದಾಗಿ ವರದಿ ತಿಳಿಸಿದೆ.

error: Content is protected !!
Scroll to Top