ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಟ್ರಾವೆಲ್ಲರ್ ಪಲ್ಟಿ ➤ ಟೆಂಪೋದಲ್ಲಿತ್ತು ಅಕ್ರಮ ದನದ ಮಾಂಸದ ಕಟ್ಟು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮಾ.17. ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ಟೆಂಪೋ ಟ್ರಾವೆಲ್ಲರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಲಾವತ್ತಡ್ಕದಲ್ಲಿ ಮಂಗಳವಾರ ಮುಂಜಾನೆ ನಡೆದಿದೆ.

ಹಾಸನ ಕಡೆಯಿಂದ ಉಪ್ಪಿನಂಗಡಿಗೆ ಬರುತ್ತಿದ್ದ ಟೆಂಪೋ ಟ್ರಾವೆಲ್ಲರ್ ಲಾವತ್ತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗಡ್ಡವಾಗಿ ಮಗುಚಿ ಬಿದ್ದಿದೆ. ವಿಷಯ ತಿಳಿದು ಘಟನಾ ಸ್ಥಳಕ್ಕೆ ತೆರಳಿದ ನೆಲ್ಯಾಡಿ ಹೊರಠಾಣೆ ಪೊಲೀಸರು ಪರಿಶೀಲನೆ ನಡೆಸಿದಾಗ ಟರ್ಪಲ್‌ವೊಂದರಲ್ಲಿ ಕಟ್ಟಿದ್ದ ಜಾನುವಾರು ಮಾಂಸ ಪತ್ತೆಯಾಗಿದೆ. ದನದ ಮಾಂಸ ಹಾಗೂ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಆರೋಪಿಗಳು ಪರಾರಿಯಾಗಿದ್ದಾರೆಂದು ತಿಳಿದು ಬಂದಿದೆ.

Scroll to Top