ರಾಜ್ಯದಲ್ಲಿ ಮತ್ತಿಬ್ಬರಿಗೆ ಕೊರೋನ ಪಾಸಿಟಿವ್: ಸೋಂಕಿತರ ಸಂಖ್ಯೆ 13ಕ್ಕೇರಿಕೆ

ಬೆಂಗಳೂರು, ಮಾ.18: ಅಮೆರಿಕ ಮತ್ತು ಸ್ಪೇನ್ ಪ್ರವಾಸ ಮಾಡಿದ್ದ ಇಬ್ಬರು ಬೆಂಗಳೂರು ಮೂಲದವರಲ್ಲಿ ಕೊರೋನ ಸೋಂಕು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತನ್ನ ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದಾರೆ.

’ಬೆಂಗಳೂರಿನಲ್ಲಿ ಮತ್ತಿಬ್ಬರಿಗೆ ಕೊರೋನ ಸೋಂಕು ದೃಢಪಟ್ಟಿದೆ. ಒಬ್ಬರು 56 ವಯಸ್ಸು, ಅಮೆರಿಕ ಪ್ರವಾಸದಿಂದ ಮಾರ್ಚ್ 6ರಂದು ಹಿಂದಿರುಗಿದ್ದರು. ಇನ್ನೊಬ್ಬರು 25 ವರ್ಷದ ಮಹಿಳೆಯು, ಸ್ಪೇನ್ ಪ್ರವಾಸದಿಂದ ಹಿಂದಿರುಗಿದ್ದು, ಇಬ್ಬರನ್ನು ಈಗಾಗಲೇ ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ. ಹಾಗೂ ಇವರೊಂದಿಗೆ ಸಂಪರ್ಕ ಹೊಂದಿದವರನ್ನು ಪತ್ತೆ ಮಾಡಲಾಗಿದ್ದು, ಅವರೆಲ್ಲರನ್ನೂ ಕಡ್ಡಾಯವಾಗಿ ಅವರ ಮನೆಯಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದೆ. ಎಲ್ಲಾ ಅಂತಾರಾಷ್ಟ್ರೀಯ ಪ್ರಯಾಣಿಕರನ್ನು ತಪಾಸಣೆ ಮಾಡುವ ಕಾರ್ಯ ನಿರಂತರ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ.

Also Read  ಮೆಡಿಕಲ್ ಶಾಪ್ ನಲ್ಲಿ ಅಮಲು ಮಾತ್ರೆಗಳು ಪತ್ತೆ ➤ ಇಬ್ಬರು ಆರೋಪಿಗಳ ಬಂಧನ

error: Content is protected !!
Scroll to Top