ಕೊರೋನಾ ವೈರಸ್ ಹಿನ್ನೆಲೆ ➤ ಪರೀಕ್ಷೆ ಇಲ್ಲದೆ ತೇರ್ಗಡೆ ಇಲ್ಲ – ಸಾರ್ವಜನಿಕ ಶಿಕ್ಷಣ ಇಲಾಖೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ.19, ಕೊರೊನಾ ವೈರಸ್‌ ಭೀತಿಯ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದ್ದು, 1 ರಿಂದ 6ನೇ ತರಗತಿವರೆಗಿನ ಪರೀಕ್ಷೆಗಳನ್ನು ಕ್ಯಾನ್ಸಲ್‌ ಮಾಡಿ 7 ರಿಂದ 9 ನೇ ತರಗತಿವರೆಗಿನ ಪರೀಕ್ಷೆಗಳನ್ನೂ ಮುಂದೂಡಲಾಗಿದೆ. ಆದರೆ 7 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೇ ಮುಂದಿನ ತರಗತಿಗಳಿಗೆ ಪ್ರವೇಶ ನೀಡುವ ಪ್ರಸ್ತಾಪ ಸದ್ಯಕ್ಕಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.

ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಈಗಾಗಲೇ 1 ರಿಂದ 6ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಸಂಪೂರ್ಣವಾಗಿ ರಜೆ ಘೋಷಣೆ ಮಾಡಲಾಗಿದ್ದು, 7ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ 2020 ರ ಮಾರ್ಚ್ 16 ರಿಂದ ಪರೀಕ್ಷೆಗಳು ನಡೆಯಬೇಕಿತ್ತು. ಪರೀಕ್ಷೆ ವೇಳೆ ವಿದ್ಯಾರ್ಥಿಗಳಿಗೆ ಒಬ್ಬರಿಂದ ಮತ್ತೊಬ್ಬರಿಗೆ ಸೋಂಕು ಹರಡುವ ಸಾಧ್ಯತೆ ಇರುವುದರಿಂದ ತಾತ್ಕಾಲಿಕವಾಗಿ ಅಧ್ಯಯನ ರಜೆ ಘೋಷಣೆ ಮಾಡಲಾಗಿದೆ. ಪರಿಸ್ಥಿತಿ ತಿಳಿಗೊಂಡ ತಕ್ಷಣ ಹೊಸ ವೇಳಾಪಟ್ಟಿ ಪ್ರಕಟಿಸಿ 7 ನೇ ತರಗತಿ ವಿದ್ಯಾರ್ಥಿಗಳಿಗೆ ‘ಮೌಲ್ಯಾಂಕನ ಪರೀಕ್ಷೆ’ ಹಾಗೂ 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಲಾಗುವುದು ಎಂದರು.

Also Read  ಪ್ರವೀಣ್ ಹತ್ಯೆ ಪ್ರಕರಣ- ಎನ್ಐಎ ದಾಳಿ ➤ ಮದ್ದುಗುಂಡು, ಸುಧಾರಿತ ಶಸ್ತ್ರಾಸ್ತ್ರಗಳು ಪತ್ತೆ.

error: Content is protected !!
Scroll to Top