ಭಾರತದಲ್ಲಿ ಹೆಚ್ಚುತ್ತಿರುವ ಸೋಂಕಿತರ ಸಂಖ್ಯೆ ➤ ಐಸಿಎಸ್ಸಿ ಬೋರ್ಡ್ ದ್ವಿತೀಯ ಪಿಯು ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ.19, ತೀವ್ರಗತಿಯಲ್ಲಿ ಹರಡುತ್ತಿರುವ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಐಸಿಎಸ್ ಇ ಬೋರ್ಡ್ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಗುರುವಾರ ಮುಂದೂಡಿದೆ.

ಹತ್ತನೇ ತರಗತಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮಾರ್ಚ್ 31ರವರೆಗೆ ಮುಂದೂಡಲಾಗಿದೆ ಎಂದು ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (ಸಿಐಎಸ್ ಸಿಇ) ತಿಳಿಸಿದೆ. ಎಲ್ಲಾ ಪರೀಕ್ಷೆಗಳ ವೇಳಾಪಟ್ಟಿಯನ್ನು ಮಾರ್ಚ್ 31ರ ನಂತರ ಘೋಷಿಸುವ ಸಾಧ್ಯತೆ ಇರುವುದಾಗಿ ತಿಳಿಸಿದೆ. ಅಲ್ಲದೇ ಮೌಲ್ಯಮಾಪನ ಕೆಲಸ ಕೂಡಾ ಮಾರ್ಚ್ 31ರಂದು ಮರು ನಿಗದಿಪಡಿಸಲಾಗುವುದು ಎಂದು ವರದಿ ವಿವರಿಸಿದೆ.

Also Read  ದೇಶದ ಮೊದಲ ಸ್ವಯಂಚಾಲಿತ ರೈಲು ಸೇವೆಗೆ ಚಾಲನೆ ➤ ಸಂತಸ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ಭಾರತದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ ಸೋಂಕು ಪೀಡಿತರ ಸಂಖ್ಯೆ ಹೆಚ್ಚಳವಾಗುವ ಜತೆಗೆ ಇಂದು ದೇಶಾದ್ಯಂತ ಕೋವಿಡ್-19 ಪೀಡಿತರ ಸಂಖ್ಯೆ 180ಕ್ಕೆ ಏರಿದೆ.

error: Content is protected !!
Scroll to Top