ಕೊರೋನಾಕ್ಕೆ ಬೆಚ್ಚಿಬಿದ್ದ ಭಾರತ ➤ ಮಾರ್ಚ್ 22 ರಂದು ‘ಜನತಾ ಕರ್ಫ್ಯೂ’: ಪ್ರಧಾನಿ ಮೋದಿ ಕರೆ

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ.19. ದೇಶದಲ್ಲಿ ಕೊರೊನಾ ವೈರಸ್ ನ ಅಟ್ಟಹಾಸವು ದಿನೇ ದಿನೇ ಹೆಚ್ಚಾಗುತ್ತಿದ್ದು, ಆತಂಕ ಸೃಷ್ಟಿಯಾಗುತ್ತಿರುವ ಹಿನ್ನೆಲೆಯಲ್ಲಿ ಮಾರ್ಚ್ 22 ಭಾನುವಾರದಂದು ಬೆಳಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ‘ಜನತಾ ಕರ್ಫ್ಯೂ’ ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ಇಂದು ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಕೊರೋನಾದಿಂದಾಗಿ ಇಡೀ ಜಗತ್ತೇ ಸಮಸ್ಯೆಯನ್ನು ಎದುರಿಸುತ್ತಿದೆ. ಕೊರೊನಾವೈರಸ್ ಗೆ ಇನ್ನೂ ಸರಿಯಾದ ಲಸಿಕೆ ಸಿಕ್ಕಿಲ್ಲ. ನಿಮ್ಮ ಕೆಲ ವಾರಗಳು ನನಗೆ ಬೇಕಾಗಿದೆ. ದೇಶದ ನಾಗರಿಕರು ಕೇಂದ್ರ, ರಾಜ್ಯ ಸರಕಾರಗಳ ಸೂಚನೆಗಳನ್ನು ಪಾಲಿಸುವ ಮೂಲಕ ಸೋಂಕು ಪೀಡಿತರಾಗುವುದರಿಂದ ಪಾರಾಗಬೇಕಿದೆ. ಇತರರು ನಮ್ಮಿಂದ ತೊಂದರೆಗೊಳಗಾಗದಂತೆ ಮನೆಯಿಂದಲೇ ವ್ಯವಹಾರ, ಉದ್ಯಮ, ಕೆಲಸಗಳನ್ನು ನಿರ್ವಹಿಸುವಂತೆ ದೇಶದ ಜನತೆಗೆ ಕರೆ ನೀಡಿದ್ದಾರೆ. ಜನರು ಮಾರ್ಚ್ 22ರಂದು ಬೆಳಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ‘ಜನತಾ ಕರ್ಫ್ಯೂ’ವನ್ನು ಹೇರಬೇಕು ಎಂದರು. ಈ ಸಮಯದಲ್ಲಿ ಮನೆಯಿಂದ ಹೊರಬರಬೇಡಿ ಎಂದವರು ಕರೆ ನೀಡಿದರು.

Also Read  ಕಡಬ ಕಂದಾಯ ನಿರೀಕ್ಷಕ ಅವಿನ್ ರಂಗತ್ತಮಲೆ ವರ್ಗಾವಣೆ ಆದೇಶಕ್ಕೆ ತಡೆ ➤ ಆಡಳಿತಾತ್ಮಕ ನ್ಯಾಯ ಮಂಡಳಿಯಿಂದ ಮಧ್ಯಂತರ ಆದೇಶ

error: Content is protected !!
Scroll to Top