ಕೊನೆಗೂ ಬಿತ್ತು ನಿರ್ಭಯಾ ಹಂತಕರ ಕೊರಳಿಗೆ ಗಲ್ಲು ➤ ಅತ್ಯಾಚಾರಿಗಳಿಗೆ ಕಠಿಣ ಸಂದೇಶ ರವಾನೆ

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ.20. ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ದೆಹಲಿಯ ಅರೆ ವೈದ್ಯಕೀಯ ಪದವಿ ವಿದ್ಯಾರ್ಥಿನಿ ನಿರ್ಭಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳನ್ನು ದೆಹಲಿಯ ತಿಹಾರ್ ಜೈಲಿನಲ್ಲಿ ಶುಕ್ರವಾರ ಬೆಳಗ್ಗಿನ ಜಾವ ಗಲ್ಲಿಗೇರಿಸಲಾಯಿತು.

ನಿರ್ಭಯಾ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳಾದ ಮುಕೇಶ್ ಸಿಂಗ್, ವಿನಯ್ ಶರ್ಮಾ, ಅಕ್ಷಯ್ ಠಾಕೂರ್ ಹಾಗೂ ಪವನ್ ಗುಪ್ತ ತಮ್ಮ ವಕೀಲರ ಮೂಲಕ ವಿವಿಧ ಕಸರತ್ತು ನಡೆಸಿದರೂ ಗಲ್ಲು ಶಿಕ್ಷೆಯನ್ನು ತಪ್ಪಿಸಲು ಸಾಧ್ಯವಾಗಲಿಲ್ಲ. ಮ್ಯಾಜಿಸ್ಟ್ರಿಟ್ ಸಮ್ಮುಖದಲ್ಲಿ ಗಲ್ಲು ಶಿಕ್ಷೆಯ ಪ್ರಕ್ರಿಯೆ ನಡೆದಿದ್ದು, ಶುಕ್ರವಾರ ಬೆಳಗ್ಗಿನ ಜಾವ 5.30 ಕ್ಕೆ ನಾಲ್ವರು ಅಪರಾಧಿಗಳನ್ನು ಗಲ್ಲಿಗೇರಿಸಲಾಗಿದೆ. ಈ ಮೂಲಕ ಅತ್ಯಾಚಾರಿಗಳಿಗೆ ಕಠಿಣ ಸಂದೇಶ ರವಾನೆಯಾಗಿದೆ.

Also Read  ಬೆಳ್ತಂಗಡಿ: ಚಿನ್ನಾಭರಣಕ್ಕಾಗಿ ಒಂಟಿ ವೃದ್ದೆಯ ಬರ್ಬರ ಹತ್ಯೆ..!!

error: Content is protected !!
Scroll to Top