ಮಗಳ ಸಾವಿಗೆ ಏಳು ವರ್ಷಗಳ ಬಳಿಕ ನ್ಯಾಯ ಸಿಕ್ಕಿದೆ ➤ ನಿರ್ಭಯಾ ತಾಯಿ ಪ್ರತಿಕ್ರಿಯೆ

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ.20. ನನ್ನ ಮಗಳ ಸಾವಿಗೆ 7 ವರ್ಷಗಳ ಬಳಿಕವಾದರೂ ನ್ಯಾಯ ಸಿಕ್ಕಿತಲ್ಲ. ಈ ದಿನಕ್ಕಾಗಿ ನಾನು ಕಾಯುತ್ತಿದ್ದೆ. ಈ ದಿನವನ್ನು ನನ್ನ ಮಗಳಿಗೆ ಅರ್ಪಿಸುತ್ತಿದ್ದೇನೆ ಎಂದು ನಿರ್ಭಯಾ ತಾಯಿ ಪ್ರತಿಕ್ರಿಯಿಸಿದ್ದಾರೆ.

ತನ್ನ ಮಗಳನ್ನು ಅತ್ಯಾಚಾರಗೈದು ಚಿತ್ರಹಿಂಸೆ ನೀಡಿ ಕೊಂದ ಅಪರಾಧಿಗಳಿಗೆ ಗಲ್ಲು ಶಿಕ್ಷೆ ನೀಡಿದ ನಂತರ ಅವರು ಈ ರೀತಿ ಪ್ರತಿಕ್ರಿಯಿಸಿದರು. 2012ರಿಂದಲೂ ಮಗಳ ಸಾವಿಗೆ ನ್ಯಾಯ ಕೊಡಿಸಿ ಎಂದು ಮನವಿ ಮಾಡುತ್ತಲೇ ಬಂದಿದ್ದೆವು. ಕೊನೆಗೂ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಯಾಗಿದೆ. ಇಂದು ನಮಗೆ ನ್ಯಾಯ ಸಿಕ್ಕಿದೆ. ನ್ಯಾಯಾಂಗ ವ್ಯವಸ್ಥೆ ಹಾಗೂ ಸರ್ಕಾರಕ್ಕೆ ಧನ್ಯವಾದ ತಿಳಿಸಿದರು.

Also Read  ಮಂಗಳೂರು: ಬಾವಿಗೆ ಬಿದ್ದ ಸ್ಕೂಟರ್ ➤ ಸವಾರ ಮೃತ್ಯು

error: Content is protected !!
Scroll to Top