ಮಂಗಳೂರು: ಬುಲೆಟ್ – ಲಾರಿ ನಡುವೆ ಢಿಕ್ಕಿ ➤ ಪುತ್ತೂರಿನ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು



(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.20. ಲಾರಿ ಹಾಗೂ ಬುಲ್ಲೆಟ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬುಲ್ಲೆಟ್ ಸವಾರ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ.





ಮೃತ‌ ಸವಾರನನ್ನು ಪುತ್ತೂರು ತಾಲೂಕಿನ ಬಡಗನ್ನೂರು ಪೇರಾಲ್ ನಿವಾಸಿ ಚಂದ್ರಶೇಖರ್ ಆಳ್ವರ ಪುತ್ರ ಪ್ರಣ್ವಿತ್ ಆಳ್ವ (21) ಎಂದು ಗುರುತಿಸಲಾಗಿದೆ. ಮೂಡಬಿದಿರೆಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಪ್ರಣ್ವಿತ್ ಚಲಯಿಸುತ್ತಿದ್ದ ಹಿಮಾಲಯ ಬುಲ್ಲೆಟ್ ಮಂಗಳೂರಿನ ಮರೋಳಿ ಎಂಬಲ್ಲಿ ಲಾರಿಗೆ ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.






error: Content is protected !!
Scroll to Top