ಮಧ್ಯಪ್ರದೇಶ ಮುಖ್ಯಮಂತ್ರಿ ಕಾಮಲ್ ನಾಥ್ ರಾಜೀನಾಮೆ

ಹೊಸದಿಲ್ಲಿ, ಮಾ.20: ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಬಹುಮತ ಸಾಬೀತುಪಡಿಸುವ ಮುನ್ನವೇ ಮಧ್ಯಪ್ರದೇಶ ಮುಖ್ಯಮಂತ್ರಿ ಸ್ಥಾನಕ್ಕೆ ಕಾಮಲ್ ನಾಥ್ ಶುಕ್ರವಾರ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಇದರಿಂದ 15ತಿಂಗಳ ಕಾಂಗ್ರೆಸ್ ನೇತೃತ್ವದ ಸರಕಾರ ಪತನದ ಅಂಚಿನಲ್ಲಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಮಲ್ ನಾಥ್ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷದಿಂದ ಬಂಡಾಯ ಎದ್ದು 22 ಶಾಸಕರು ರಾಜೀನಾಮೆ ನೀಡಿದ್ದರಿಂದ ಮಧ್ಯಪ್ರದೇಶದಲ್ಲಿ ರಾಜಕೀಯ ಬಿಕ್ಕಟ್ಟು ಸೃಷ್ಟಿಯಾಗಿತ್ತು. ಏತನ್ಮಧ್ಯೆ ರಾಜ್ಯಪಾಲರು ಬಹುಮತ ಸಾಬೀತುಪಡಿಸುವಂತೆ ಕಮಲ್ ನಾಥ್ ಸರ್ಕಾರಕ್ಕೆ ಸೂಚಿಸಿದ್ದರು.

ಆದರೆ ಬಜೆಟ್ ಅಧಿವೇಶನವನ್ನು ಸ್ಪೀಕರ್ ಪ್ರಜಾಪತಿ ಅವರು ಕೊರೋನ ವೈರಸ್ ಭೀತಿಯ ನೆಪವೊಡ್ಡಿ ಬಹುಮತ ಸಾಬೀತುಪಡಿಸಲು ಆದೇಶ ನೀಡದೆ ಕಲಾಪ ಮುಂದೂಡಿದ್ದರು. ಇದರಿಂದ ಅಸಮಾಧಾನಗೊಂಡ ಬಿಜೆಪಿ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.

ಶುಕ್ರವಾರ ಸಂಜೆ 5ಗಂಟೆಯೊಳಗೆ ಬಹುಮತ ಸಾಬೀತುಪಡಿಸುವಂತೆ ಸುಪ್ರೀಂಕೋರ್ಟ್ ಮಧ್ಯಪ್ರದೇಶ ಮುಖ್ಯಮಂತ್ರಿ ಕಲಮ್ ನಾಥ್ ಗೆ ಸೂಚನೆ ನೀಡಿತ್ತು. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಮಲ್ ನಾಥ್, ರಾಜೀನಾಮೆ ನೀಡಿರುವುದಾಗಿ ಘೋಷಿಸಿದರು.

error: Content is protected !!

Join the Group

Join WhatsApp Group