ಕೇರಳದಲ್ಲಿ ಕೊಲೆಗೆ ಯತ್ನಿಸಿ ಕಡಬದಲ್ಲಿ ಆಶ್ರಯ ➤ ಊರವರ ಸಹಕಾರದಲ್ಲಿ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಮಾ.20. ಕೇರಳದಲ್ಲಿ ಕೊಲೆಯತ್ನ ನಡೆಸಿ ಕಡಬದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಊರವರ ಸಹಕಾರದೊಂದಿಗೆ ಕೇರಳ ಪೊಲೀಸರು ಶುಕ್ರವಾರದಂದು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕೇರಳ ರಾಜ್ಯದ ಕೊಲ್ಲಂ ಗ್ರಾಮಾಂತರ ಠಾಣಾ ವ್ಯಾಪ್ತಿಯ ಸುಗು ಎಂದು ಗುರುತಿಸಲಾಗಿದೆ. ಆರೋಪಿಯ ವಿರುದ್ಧ ಕೊಲ್ಲಂ ಠಾಣಾ ವ್ಯಾಪ್ತಿಯಲ್ಲಿ 307 ಕೇಸು ದಾಖಲಾಗಿದ್ದು, ತಲೆಮರೆಸಿಕೊಂಡಿದ್ದ ಆರೋಪಿಯು ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಮಡುಪು ಎಂಬಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆ ಸೇರಿಕೊಂಡಿದ್ದ ಎನ್ನಲಾಗಿದೆ. ಶುಕ್ರವಾರದಂದು ಕಡಬಕ್ಕೆ ಆಗಮಿಸಿದ ಕೊಲ್ಲಂ ಠಾಣಾ ಎಸ್ಐ ಶಾನ್ವಾಝ್ ಹಾಗೂ ಸಿಬ್ಬಂದಿಗಳು, ಕಡಬ ಠಾಣಾ ಹೆಡ್ ಕಾನ್ಸ್‌ಟೇಬಲ್ ಹರೀಶ್ ಹಾಗೂ ಕಾನ್ಸ್‌ಟೇಬಲ್ ಭವಿತ್ ರವರು ಊರವರ ಸಹಕಾರದೊಂದಿಗೆ ಆರೋಪಿಯನ್ನು ಬಂಧಿಸಿದ್ದಾರೆ.

Also Read  ಬೈಕ್ ಮತ್ತು ಕಾರು ಡಿಕ್ಕಿ..!    ಯುವಕ ಮೃತ್ಯು..!               

 

error: Content is protected !!
Scroll to Top