ಉಪ್ಪಿನಂಗಡಿಯಲ್ಲಿ 50 ಅಡಿ ಕಂದಕಕ್ಕೆ ಬಿದ್ದ ಕಾರು: ಅಪಾಯದಿಂದ ಪಾರು



ಉಪ್ಪಿನಂಗಡಿ, ಮಾ.20: ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಆಳದ ಕಂದಕ್ಕೆ ಉರುಳಿ ಬಿದ್ದ ಘಟನೆ ಇಲ್ಲಿಗೆ ಸಮೀಪ ಪಂಜಾಳದಲ್ಲಿ ಶುಕ್ರವಾರ ನಡೆದಿದೆ.





ಬೆಂಗಳೂರಿನಿಂದ ಉಡುಪಿ ಬರುತ್ತಿದ್ದ ಕಾರು ಉಪ್ಪಿನಂಗಡಿಯ ಪಂಜಾಳ ಸಮೀಪ ತಲುಪುತ್ತಿದ್ದಂತೆ 50 ಅಡಿ ಆಳದ ಕಂದಕ್ಕೆ ಉರುಳಿ ಬಿದ್ದಿದೆ. ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಉಡುಪಿಯ ಶಿರ್ವ ಮೂಲದ ನವೀನ್ ಮತ್ತವರ ಕುಟುಂಬ ಬೆಂಗಳೂರಿನಿಂದ ಊರಿಗೆ ಬರುತ್ತಿದ್ದರು.






ನವೀನ್, ಇಬ್ಬರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಕಾರಿನಲ್ಲಿದ್ದು, ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಇವರನ್ನು ಸ್ಥಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

error: Content is protected !!
Scroll to Top