ಕಠಿಣ ನಿರ್ಧಾರ ಕೈಗೊಂಡಲ್ಲಿ ಸಹಕರಿಸಿ: ಸಚಿವ ಕೋಟ

  • ಕೊರೋನ ವೈರಸ್ ಹಿನ್ನೆಲೆ

ಮಂಗಳೂರು, ಮಾ.21: ಕರೋನ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಕೆಲವೊಂದು ಕಟು ನಿರ್ಧಾರಗಳನ್ನು ಜಿಲ್ಲಾಡಳಿತ ಕೈಗೊಳ್ಳುವ ಪರಿಸ್ಥಿತಿ ಬರಬಹುದು. ಅಂತಹ ಸಂದರ್ಭದಲ್ಲಿ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮನವಿ ಮಾಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಜಿಲ್ಲೆಯ ಎಲ್ಲ ಶಾಸಕರು ಹಾಗೂ ಹಿರಿಯ ಅಧಿಕಾರಿಗಳನ್ನು ಒಳಗೊಂಡ ಉನ್ನತಮಟ್ಟದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಇದುವರೆಗೆ 89 ಜನರ ಸ್ಯಾಂಪಲ್ ಗಳನ್ನು ಕಳುಹಿಸಿ ಕೊಡಲಾಗಿದ್ದು ಅಷ್ಟು ಪ್ರಕರಣಗಳಲ್ಲಿ ನೆಗೆಟಿವ್ ವರದಿ ಬಂದಿದೆ ಅಧಿಕೃತವಾಗಿ ಜಿಲ್ಲೆಯಲ್ಲಿ ಸೋಂಕಿತರು ಇಲ್ಲದಿರುವುದು ಕಂಡುಬಂದಿದೆ. ಆದರೂ ಮುಂದಿನ ದಿನಗಳಲ್ಲಿ ಸೋಂಕಿತರು ಕಂಡುಬಂದರೆ ಜಿಲ್ಲೆಯಲ್ಲಿ ಇದರ ನಿಯಂತ್ರಣಕ್ಕೆ ಅತ್ಯಂತ ಕಠಿಣ ನಿರ್ಧಾರಗಳನ್ನು ಜಿಲ್ಲಾಡಳಿತ ಕೈಗೊಳ್ಳಬೇಕಾಗುತ್ತದೆ ಜನರು ಇಂತಹ ಪರಿಸ್ಥಿತಿಯಲ್ಲಿ ಯಾವುದೇ ರೀತಿಯ ಒತ್ತಡ ಹೇರದೆ ಜಿಲ್ಲಾಡಳಿತದ ತೀರ್ಮಾನಕ್ಕೆ ಬದ್ಧವಾಗಿರಬೇಕಾಗುತ್ತದೆ ಎಂದು ಹೇಳಿದರು.

ಕೇರಳ ಮತ್ತು ದಕ್ಷಿಣ ಕನ್ನಡಕ್ಕೆ ಒಟ್ಟು 17 ದಾರಿಗಳಿದ್ದು ಇವುಗಳಲ್ಲಿ 16 ದಾರಿಗಳನ್ನು ಶನಿವಾರದಿಂದಲೇ ಅನ್ವಯವಾಗುವಂತೆ ಸಂಪೂರ್ಣವಾಗಿ ಬಂದ್ ಮಾಡಲಾಗಿದೆ ಅನಿವಾರ್ಯವಾಗಿ ತುರ್ತು ಪ್ರಕರಣಗಳಲ್ಲಿ ಮಾತ್ರ ಕೇವಲ ತಲಪಾಡಿ ರಸ್ತೆಯ ಮೂಲಕ ಸಂಚರಿಸಲು ಅವಕಾಶವಿದೆ. ತಲಪಾಡಿಯಲ್ಲಿ ಸಂಪೂರ್ಣವಾಗಿ ತಪಾಸಣೆಗೊಳಪಡಿಸಿದ ಬಳಿಕವೇ ಜನರನ್ನು ಬಿಡಲಾಗುವುದು ಅಲ್ಲದೆ ತುರ್ತು ಅವಶ್ಯಕ ಸಾಮಗ್ರಿಗಳ ವಾಹನಗಳಿಗೆ ತಲಪಾಡಿ ರಸ್ತೆಯಿಂದ ಸಂಚರಿಸಲು ಅವಕಾಶ ನೀಡುವಂತೆ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

Also Read  ರೈತಾಪಿ ವರ್ಗಕ್ಕೆ ಗಾಯದ ಮೇಲೆ ಬರೆ ಎಳೆದ ಮಹಾ ಮಳೆ ► ನೆರೆ ನೀರು ಇಳಿದರೂ ಸಾಂಕ್ರಾಮಿಕ ರೋಗದ ಭೀತಿಯಲ್ಲಿ ನದಿಪಾತ್ರದ ಜನತೆ

ಜಿಲ್ಲೆಗೆ ಇತರ ಕಡೆಗಳಿಂದ ಸಂಪರ್ಕಿಸುವ ರಸ್ತೆಗಳನ್ನು ಕೂಡ ಬಂದ ಮಾಡುವ ಚಿಂತನೆ ಇದೆ ಆದರೆ ಅದು ಸಂಪೂರ್ಣವಾಗಿ ಕಾರ್ಯಗತಗೊಳಿಸಲು ಕಷ್ಟಕರ ಆದ್ದರಿಂದ ಇಂತಹ ಸಂಪರ್ಕ ರಸ್ತೆಗಳಲ್ಲಿ ವಾಹನಗಳ ಸಂಖ್ಯೆಯನ್ನು ಕಡಿಮೆ ಮಾಡುವ ಸಲಹೆ ಬಂದಿದೆ. ಮುಂದಿನ ದಿನಗಳಲ್ಲಿ ಅಗತ್ಯವಿದ್ದರೆ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಮಂಗಳೂರಿನಲ್ಲಿಯೇ ಪ್ರಯೋಗಾಲಯ ಈಗಾಗಲೇ ಮುಖ್ಯಮಂತ್ರಿಗೆ ಮನವಿ ಮಾಡಿದ್ದೇವೆ ಆದಷ್ಟು ಬೇಗನೆ ಮಂಜೂರಾತಿ ಸಿಗುವ ನಿರೀಕ್ಷೆಯಿದೆ ಎಂದರು.

ಜಿಲ್ಲೆಯಾದ್ಯಂತ ಹಬ್ಬಹರಿದಿನ ಸಭೆ-ಸಮಾರಂಭಗಳನ್ನು ಮುಂದೂಡಲು ಈಗಾಗಲೇ ಸೂಚಿಸಲಾಗಿದೆ ಕಾರ್ಯಕ್ರಮ ಮಾಡುವವರಿಗೆ ಈ ಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ದೇವಾಲಯ ಚರ್ಚ್ ಮಸೀದಿಗಳು ಸೇರಿದಂತೆ ಪ್ರಾರ್ಥನಾ ಕೇಂದ್ರಗಳಲ್ಲಿ ಮಿತಿ ಇಟ್ಟುಕೊಂಡು ಸ್ವಯಂಪ್ರೇರಣೆಯಿಂದ ನಿಯಂತ್ರಣ ಕೈಗೊಳ್ಳುವ ಕೆಲಸಗಳನ್ನು ಮಾಡಬೇಕಾಗುತ್ತದೆ ಎಂದು ಸಲಹೆ ನೀಡಿದರು.

Also Read  ಕಡಬ: ಇಂದಿನಿಂದ ಡಿ. 15ರ ವರೆಗೆ ಭೂಮಿ ಕೇಂದ್ರದ ಕೆಲಸಗಳು ಸ್ಥಗಿತ

ಶಾಸಕರಾದ ಯು.ಟಿ. ಖಾದರ್, ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ರಾಜೇಶ್ ನಾಯಕ್ ಐವನ್ ಡಿಸೋಜಾ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಮೇಯರ್ ದಿವಾಕರ ಪಾಂಡೇಶ್ವರ ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಉಪಸ್ಥಿತರಿದ್ದರು.

ಜಿಲ್ಲೆಯಲ್ಲಿ ಯಾರೇ ಅಪರಿಚಿತ ವ್ಯಕ್ತಿಗಳು ಅಥವಾ ಸೋಂಕಿತ ವ್ಯಕ್ತಿಗಳು ಕಂಡುಬಂದರೆ ತಕ್ಷಣ ಸಾರ್ವಜನಿಕರು ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು ಈಗಾಗಲೇ ವಿಮಾನನಿಲ್ದಾಣದಿಂದ ಬರುವ ಅವರೆಲ್ಲರಿಗೂ ಅಳಿಸಲಾಗದ ಶಾಯಿ ಮುದ್ರೆ ಹೊತ್ತ ಲಾಗಿದ್ದು ಅಂತಹವರು ಹೊರಗಡೆ ತಿರುಗಾಡುತ್ತಿದ್ದಾರೆ ಅವರನ್ನು ಬಂಧನಕ್ಕೊಳ ಪಡಿಸಲಾಗುವುದು ಅಂತವರು ತಿರುಗಾಡುತ್ತಿರುವ ಇರುವುದನ್ನು ನೋಡುವ ನೋಡಿದವರು ಕೂಡಲೇ ಜಿಲ್ಲಾಡಳಿತಕ್ಕೆ 104, 1077ಗೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದು ಮನವಿ ಮಾಡಿದರು.

error: Content is protected !!
Scroll to Top