ರಾಜ್ಯದಲ್ಲಿ ಮತ್ತೊಂದು ಕೊರೋನ ದೃಢ: ಒಟ್ಟು ಪೀಡಿತರ ಸಂಖ್ಯೆ 19ಕ್ಕೆ ಏರಿಕೆ

ಬೆಂಗಳೂರು, ಮಾ.21: ಮಹಾಮಾರಿ ಕೊರೋನ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ. ರಾಜ್ಯದಲ್ಲಿ ಶನಿವಾರ ನಾಲ್ಕು ಹೊಸ ಪ್ರಕರಣಗಳು ಬೆಳಕಿದೆ ಬಂದಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಚಿಕ್ಕಬಳ್ಳಾಪುರ ಗೌರಿಬಿದನೂರಿನಲ್ಲಿ ಒಂದು ಪ್ರಕರಣ ಮತ್ತು ಬೆಂಗಳೂರಿನಲ್ಲಿ ಮೂರು ಹೊಸ ಪ್ರಕರಣಗಳು ದೃಢವಾಗಿದೆ ಎಂದು ವರದಿಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಒಟ್ಟು ಸಂಖ್ಯೆ 19ಕ್ಕೇರಿದೆ.

ಮಕ್ಕಾ ಪ್ರವಾಸದಿಂದ ಆಗಮಿಸಿದ್ದ 32 ವರ್ಷದ ಚಿಕ್ಕಬಳ್ಳಾಪುರ ಗೌರಿಬಿದನೂರಿನ ವ್ಯಕ್ತಿಗೆ ಸೋಂಕು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದರು. ನಂತರ ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಬೆಂಗಳೂರಿನಲ್ಲಿ ಮೂವರಲ್ಲಿ ಸೋಂಕು ಪತ್ತೆಯಾಗಿದೆ ಎಂದು ಮಾಹಿತಿ ನೀಡಿದ್ಧಾರೆ.
ಭಾರತದಲ್ಲಿ ಒಟ್ಟು 271 ಕೋವಿಡ್-19 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.

Scroll to Top