ಮತ್ತೊಬ್ಬ ವ್ಯಕ್ತಿಗೆ ಕೊರೋನ ಸೋಂಕು ಧೃಡ: ರಾಜ್ಯದಲ್ಲಿ ಪೀಡಿತರ ಸಂಖ್ಯೆ 21ಕ್ಕೆ ಏರಿಕೆ

ಧಾರವಾಡ, ಮಾ.22: ರಾಜ್ಯದಲ್ಲಿ ಮತ್ತೊಬ್ಬ ವ್ಯಕ್ತಿಗೆ ಕೊರೋನ ಸೋಂಕು ಇರುವುದು ಧೃಡಪಟ್ಟಿದ್ದು, ಇದೀಗ ರಾಜ್ಯದಲ್ಲಿ ಕೊರೋನ ಸೋಂಕಿತರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ.

ಸೋಂಕಿತ ವ್ಯಕ್ತಿಯು ಆಸ್ಟ್ರೇಲಿಯಾ, ದುಬೈ, ಮಸ್ಕತ್ ಹಾಗೂ ಗೋವಾ ಮೂಲಕ ಧಾರವಾಡ ನಗರಕ್ಕೆ ಆಗಮಿಸಿರುವುದಾಗಿ ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.

ವ್ಯಕ್ತಿಯಲ್ಲಿ ಶಂಕಿತ ಕೊರೋನದ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ , ಮಾರ್ಚ್ 18 ರಂದು ಅವರು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದರು.

ಅದೇ ದಿನ ಅವರ ಅವರ ಗಂಟಲು ಮತ್ತು ಮೂಗಿನ ದ್ರವದ ಮಾದರಿಯನ್ನು ತಪಾಸಣೆಗಾಗಿ ಶಿವಮೊಗ್ಗಕ್ಕೆ ಕಳುಹಿಸಲಾಗಿದ್ದು ಇದೀಗ ಅವರಿಗೆ ಕೊರೋನ ಸೋಂಕು ಇರುವುದು ದೃಢಪಟ್ಟಿದೆ. ಇವರಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Also Read  ಸುಬ್ರಹ್ಮಣ್ಯ: ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಎದುರಾದ ಬಸ್ ಸಮಸ್ಯೆ ➤ ಕೂಡಲೇ ಬಸ್ ಒದಗಿಸುವಂತೆ ಎಬಿವಿಪಿ ವತಿಯಿಂದ ಪ್ರತಿಭಟನೆ

 

error: Content is protected !!
Scroll to Top