ಮಾ.31ರವರೆಗೆ ಅಂತರ್ ರಾಜ್ಯ ಸರಕಾರಿ ಬಸ್ ಸೇವೆ ಸ್ಥಗಿತ

ಬೆಂಗಳೂರು, ಮಾ.22: ದೇಶದಲ್ಲಿ ಹೆಚ್ಚಾಗುತ್ತಿರುವ ಕೊರೋನ ವೈರಸ್ ಸೋಂಕು ಪ್ರಕರಣಗಳ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದಿಂದ ಪ್ರಯಾಣಿಕ ರೈಲು ಸೇವೆ ಸ್ಥಗಿತ ಆದೇಶ ಹೊರಬಿದ್ದ ಬೆನ್ನಲ್ಲೇ ಇದೀಗ ಕರ್ನಾಟಕ ಸರಕಾರ ಎಲ್ಲ ಅಂತರರಾಜ್ಯ ಬಸ್ ಸೇವೆಯನ್ನು ಮಾರ್ಚ್ 31ರ ವರೆಗೆ ಸ್ಥಗಿತಗೊಳಿಸಿ ಆದೇಶ ಹೊರಡಿಸಿದೆ.

ಮಾರ್ಚ್ 31ರವರೆಗೆ ಹುಬ್ಬಳ್ಳಿ-ಧಾರವಾಡದಲ್ಲಿ ಸಾರಿಗೆ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಧಾರವಾಡ ಜಿಲ್ಲೆಯಲ್ಲಿ ಮೊದಲ ಕೊರೋನ ವೈರಸ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಹಾಗೂ ಕೊರೋನ ವೈರಸ್ ನಿಯಂತ್ರಣ ಮಾಡುವ ಸದುದ್ದೇಶದಿಂದ ಅವಳಿನಗರದಲ್ಲಿನ ಬಿಆರ್‌ಟಿಎಸ್ ಹಾಗೂ ಬೇಂದ್ರೆ ಬಸ್ ಸಂಚಾರವನ್ನು ಮಾರ್ಚ್ 31ರವರೆಗೂ ಸ್ಥಗಿತಗೊಳಿಸಿ ಎಂದು ಆದೇಶ ಹೊರಡಿಸಿದೆ.

Also Read  ಉಡುಪಿ: ಸರಕಾರಿ ಉದ್ಯೋಗದ ಹೆಸರಲ್ಲಿ ಆರೋಗ್ಯ ಸಹಾಯಕಿಗೆ ಲಕ್ಷಾಂತರ ರೂ. ವಂಚನೆ ➤ ಪ್ರಕರಣ ದಾಖಲು

error: Content is protected !!
Scroll to Top