ಸೋಮವಾರ ನಡೆಯಬೇಕಿದ್ದ ದ್ವಿತೀಯ ಪಿಯು ಪರೀಕ್ಷೆ ಮುಂದೂಡಿಕೆ

ಬೆಂಗಳೂರು, ಮಾ.22: ಸೋಮವಾರ ನಡೆಯಬೇಕಿದ್ದ ದ್ವಿತೀಯ ಪಿಯು ಪರೀಕ್ಷೆಯನ್ನು ರಾಜ್ಯ ಸರಕಾರ ಮುಂದೂಡಿದೆ ಎಂದು ರಾಜ್ಯ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಪಿಯು ವಿದ್ಯಾರ್ಥಿಗಳಿಗೆ ಈ ವರ್ಷದ ಅಂತಿಮ ವಿಷಯವಾಗಿ ಸೋಮವಾರ ಇಂಗ್ಲಿಷ್ ಭಾಷಾ ಪರೀಕ್ಷೆ ನಡೆಯಬೇಕಿತ್ತು. ಇದೀಗ ಅದನ್ನು ಮುಂದೂಡಲಾಗಿದೆ ಮುಂದಿನ ದಿನಾಂಕವನ್ನು ಮಾರ್ಚ್ 31ರ ನಂತರ ನಿರ್ಧರಿಸಲಾಗುವುದು ಎಂದು ಶಿಕ್ಷಣ ಸಚಿವರು ತಮ್ಮ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Also Read  ಮಂಗಳೂರು: ಪಣೋಲಿಬೈಲ್ ದೈವಸ್ಥಾನದ ನೂತನ ಆಡಳಿತ ಅಧಿಕಾರಿಯಾಗಿ ರಶ್ಮಿ.ಎಸ್.ಆರ್ ನೇಮಕ

 

error: Content is protected !!
Scroll to Top