ಮಹಾರಾಷ್ಟ್ರದಿಂದ ಬಂದಿದ್ದ ಸುಬ್ರಹ್ಮಣ್ಯದ ಯುವತಿಗೆ ಜ್ವರ ➤ ಹೆಚ್ಚಿನ ಪರೀಕ್ಷೆಗಾಗಿ ಮಂಗಳೂರಿಗೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಮಾ.23. ದೇಶದಲ್ಲೆಡೆ ಕೊರೋನಾ ವೈರಸ್ ಹರಡುತ್ತಿರುವುದರ ನಡುವೆ ಮಹಾರಾಷ್ಟ್ರದಲ್ಲಿ ಕರ್ತವ್ಯದಲ್ಲಿದ್ದ ಯುವತಿಯೋರ್ವಳು ತನ್ನ ಹುಟ್ಟೂರು ಕುಕ್ಕೇ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.

ಯುವತಿಗೆ ಜ್ವರ ಇದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ತೆರಳಿದ್ದು, ಕೆಮ್ಮು ಇದ್ದ ಕಾರಣ ಮಂಗಳೂರಿಗೆ ಕರೆದೊಯ್ಯಲಾಗಿದೆ. ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕು ಹೆಚ್ಚಾಗಿದ್ದು, ಯುವತಿ ವಾಸವಿದ್ದ ಪರಿಸರದಲ್ಲಿ ಕೊರೋನಾ ಭೀತಿ ಇದ್ದುದರಿಂದ ಯುವತಿಯನ್ನು ಹೆಚ್ಚಿನ ಪರೀಕ್ಷೆಗಾಗಿ ಮಂಗಳೂರಿಗೆ ಕಳುಹಿಸಿಕೊಡಲಾಗಿದೆ. ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ವೈದ್ಯಾಧಿಕಾರಿ ‘ನ್ಯೂಸ್ ಕಡಬ’ಕ್ಕೆ ತಿಳಿಸಿದ್ದಾರೆ.

Also Read  ಬೀದಿ ಬದಿ ವ್ಯಾಪಾರಸ್ಥರ ಸಾಲ ಸೌಲಭ್ಯಕ್ಕೆ ಕರೆ

error: Content is protected !!
Scroll to Top