ವೆನ್ಲಾಕ್ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಸಂಸದ ನಳಿನ್ ಕುಮಾರ್

ಮಂಗಳೂರು, ಮಾ.24: ದ.ಕ. ಜಿಲ್ಲಾಸ್ಪತ್ರೆ ವೆನ್ಲಾಕ್‌ಗೆ ಮಂಗಳವಾರ ಸಂಸದ ನಳಿನ್ ಕುಮಾರ್ ಕಟೀಲು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಾಮಾಜಿಕ ಜಾಲತಾಣಗಳಲ್ಲಿ ಮಂಗಳೂರಿನಲ್ಲಿರುವ ಜಿಲ್ಲಾ ಸರಕಾರಿ ಆಸ್ಪತ್ರೆ ವೆನ್ಲಾಕ್ ಬಗ್ಗೆ ಅಪಪ್ರಚಾರ ನಡೆಸಿರುವ ಹಿನ್ನೆಲೆಯಲ್ಲಿ ಸಂಸದರು ಭೇಟಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಮಂಗಳೂರಿನಲ್ಲಿರುವ ಜಿಲ್ಲಾ ಸರಕಾರಿ ಆಸ್ಪತ್ರೆ ವೆನ್ಲಾಕ್ ಬಗ್ಗೆ ಅಪಪ್ರಚಾರ ನಡೆಸಿದ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಅವರು ಅಧಿವೇಶನದ ನಿಮಿತ್ತ ದಿಲ್ಲಿಯಲ್ಲಿ ಇದ್ದು ತಮ್ಮ ಲೋಕಸಭಾ ಕ್ಷೇತ್ರದಲ್ಲಿರುವ ಜನರು ವೆನ್ಲಾಕ್ ಆಸ್ಪತ್ರೆಯಲ್ಲಿ ಕೊರೋನ ಸೋಂಕಿತರನ್ನು ಸರಿಯಾಗಿ ನೋಡಿಕೊಳ್ಳಲಾಗುತ್ತಿಲ್ಲ ಎನ್ನುವ ಊಹಾಪೋಹದ ಬಗ್ಗೆ ಗೊಂದಲ ಪಡುತ್ತಿರುವುದನ್ನು ಅರಿತುಕೊಂಡ ಸಂಸದರು ಆ ಕೂಡಲೇ ದಿಲ್ಲಿಯಿಂದ ಬೆಂಗಳೂರಿಗೆ ಬಂದು ಅಲ್ಲಿಂದ ರಸ್ತೆ ಮಾರ್ಗವಾಗಿ ಮಂಗಳೂರಿಗೆ ಆಗಮಿಸಿದರು.

Also Read  ಸುಬ್ರಹ್ಮಣ್ಯ: ಕಾಡಾನೆ ದಾಳಿ ➤ ಅಡಿಕೆ , ಬಾಳೆ, ಕೃಷಿ ನಾಶ

ಮಂಗಳೂರಿಗೆ ತಲುಪಿದ ಕೂಡಲೇ ನೇರವಾಗಿ ವೆನ್ಲಾಕ್ ಆಸ್ಪತ್ರೆಗೆ ತೆರಳಿದ ನಳಿನ್ ಕುಮಾರ್ ಕಟೀಲು ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿ, ಆಸ್ಪತ್ರೆಯ ಅಧೀಕ್ಷಕಿ ಸಹಿತ ವಿವಿಧ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಸಮಾಲೋಚನೆ ನಡೆಸಿದರು.

ಸಂಸದರಿಗೆ ಸೂಕ್ತ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರು ಕೊರೋನ ಚಿಕಿತ್ಸೆಗಾಗಿ ಪ್ರತ್ಯೇಕ ಬ್ಲಾಕ್ ವ್ಯವಸ್ಥೆ ಮಾಡಿರುವುದನ್ನು ನಳಿನ್ ಕುಮಾರ್ ಕಟೀಲರ ಗಮನಕ್ಕೆ ತಂದರು.

ಒಬ್ಬ ವ್ಯಕ್ತಿಯಲ್ಲಿ ಮಾತ್ರ ಕೊರೋನ ಪಾಸಿಟಿವ್ ಪತ್ತೆಯಾಗಿದ್ದು, ಮತ್ತು ಇನ್ನೊಬ್ಬ ಕೊರೋನ ಶಂಕಿತ ವ್ಯಕ್ತಿಯನ್ನು ತೀವ್ರ ನಿಗಾದಲ್ಲಿ ಇಡಲಾಗಿದೆ. ಸುಮಾರು 200 ಜನರನ್ನು ತೀವ್ರ ನಿಗಾ ಘಟಕದಲ್ಲಿ ಇಡುವ ವ್ಯವಸ್ಥೆ ಇದೆ. ಆದ್ದರಿಂದ ಜನರು ಭಯಭೀತರಾಗುವ ಅವಶ್ಯಕತೆ ಇಲ್ಲ ಎಂದು ಮಾಹಿತಿ ನೀಡಿದರು.

ಜನರು ಊಹಾಪೋಹಗಳನ್ನು ನಂಬದಂತೆ, ಜಿಲ್ಲಾಡಳಿತ, ರಾಜ್ಯ, ರಾಷ್ಟ್ರ ಸಂಪೂರ್ಣವಾಗಿ ಜನರ ಆರೋಗ್ಯ ಕಾಳಜಿಗೆ ಕಟಿ ಬದ್ಧವಾಗಿದೆ ಎಂದು ನಳಿನ್ ಕುಮಾರ್ ಜನರಿಗೆ ತಿಳಿಸಿದ್ದಾರೆ.
ಸಂಸದರ ವೆನ್ಲಾಕ್ ಭೇಟಿಯಿಂದ ಜನರಲ್ಲಿ ಮೂಡಿದ್ದ ಗೊಂದಲಕ್ಕೆ ತೆರೆ ಬಿದ್ದಂತೆ ಆಗಿದೆ.

Also Read  ಬೆಳ್ಳಾರೆ: ಮದರಂಗಿ ಶಾಸ್ತ್ರ ಮುಗಿಸಿದ ಮದುಮಗಳು ನಾಪತ್ತೆ ➤ ಬೆಳ್ಳಂಬೆಳಗ್ಗೆ ಮದುವೆ ಮನೆಯವರಿಗೆ ಬಿಗ್ ಶಾಕ್

error: Content is protected !!
Scroll to Top