ಮೂರು ವಾರಗಳ ಕಾಲ ದೇಶಾದ್ಯಂತ ಲಾಕ್ ಡೌನ್ ➤ ಪ್ರಧಾನಿ ಮೋದಿ ಘೋಷಣೆ

ನವದೆಹಲಿ, ಮಾ.24. ಕೊರೋನ ದಿನದಿಂದ ದಿನಕ್ಕೆ ತನ್ನ ಅಟ್ಟಹಾಸವನ್ನು ಮುಂದುವರಿಸಿರುವುದರ ನಡುವೆಯೇ ಮುನ್ನೆಚ್ಚರಿಕಾ ಕ್ರಮವಾಗಿ ಇಂದು ರಾತ್ರಿ 12 ಗಂಟೆಯಿಂದ ಮೂರು ವಾರಗಳ ಕಾಲ ದೇಶದಾದ್ಯಂತ ಸಂಪೂರ್ಣ ಲಾಕ್ ಡೌನ್ ಮಾಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಲಾಕ್ ಡೌನ್ ಆಗಲಿದ್ದು, ಕರ್ಫ್ಯೂ ಪರಿಸ್ಥಿತಿ ಇರಲಿದೆ. 21 ದಿನಗಳ ಕಾಲ ಈ ಲಾಕ್ ಡೌನ್ ಇರಲಿದೆ ಎಂದು ಪ್ರಧಾನಿ ತಿಳಿಸಿದ್ದಾರೆ. ಮೂರು ವಾರಗಳ ಕಾಲ ಮನೆಗಳಿಂದ ಯಾರೂ ಹೊರಹೋಗಬೇಡಿ ಎಂದು ಪ್ರಧಾನಿ ಮೋದಿ ದೇಶದ ಜನತೆಯಲ್ಲಿ ವಿನಂತಿಸಿದ್ದಾರೆ.

Also Read  ಚೆಕ್ ಬೌನ್ಸ್ ಪ್ರಕರಣದಲ್ಲಿ ರಾಕೇಶ್ ಸಾವಂತ್ ಅರೆಸ್ಟ್‌...!

error: Content is protected !!
Scroll to Top