ಮರ್ಧಾಳ: ಅಕ್ರಮ ಮದ್ಯ ಮಾರಾಟ ➤ ಓರ್ವನ ಬಂಧನ



(ನ್ಯೂಸ್ ಕಡಬ) newskadaba.com ಕಡಬ, ಮಾ.25. ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಕಡಬ ಠಾಣಾ ಪೊಲೀಸರು ಓರ್ವನನ್ನು ಬಂಧಿಸಿ, ವಿಸ್ಕಿ ಸ್ಯಾಚೆಟ್ ಹಾಗೂ ಬಿಯರ್ ಬಾಟಲ್ ಗಳನ್ನು ವಶಪಡಿಸಿಕೊಂಡಿದ್ದಾರೆ.





ಬಂಧಿತ ಆರೋಪಿಯ‌ನ್ನು ಬಂಟ್ರ ಗ್ರಾಮದ ಪಾಲೆತ್ತಡ್ಕ ನಿವಾಸಿ ಲೋಕಯ್ಯ ಎಂದು ಗುರುತಿಸಲಾಗಿದೆ. ಆರೋಪಿಯು ಕಡಬ ಠಾಣಾ ವ್ಯಾಪ್ತಿಯ ಬಂಟ್ರ ಗ್ರಾಮದ ಚಾಕೋಟೆಕೆರೆ ಎಂಬಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾನೆ ಎಂಬ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಕಡಬ ಪೊಲೀಸರು ಆರೋಪಿಯನ್ನು ಬಂಧಿಸಿ ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಿಕೊಂಡಿದ್ದಾರೆ.






error: Content is protected !!
Scroll to Top