ಬಂಟ್ವಾಳದ 10 ತಿಂಗಳ ಮಗುವಿಗೆ ಕೊರೋನ ಸೋಂಕು ದೃಢ

ಬಂಟ್ವಾಳ, ಮಾ 27: ಇಲ್ಲಿನ ಸಜಿಪನಡು ಗ್ರಾಮದ 10 ತಿಂಗಳ ಮಗುವಿನಲ್ಲಿ ಕೊರೋನ ಸೋಂಕು ಪತ್ತೆಯಾಗಿದ್ದು, ಸ್ಥಳೀಯರು ಆತಂಕಿತರಾಗಿದ್ದಾರೆ.
ಜ್ವರ ಹಾಗೂ ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಗುವನ್ನು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಗಿತ್ತು. ಮಗುವಿನಲ್ಲಿ ಶಂಕಿತ ಕೊರೋನ ಸೋಂಕು ಲಕ್ಷಣ ಕಂಡುಬಂದ ಹಿನ್ನೆಲೆಯಲ್ಲಿ ಮಗುವಿನ ಗಂಟಲು ದ್ರವವನ್ನು ಬುಧವಾರ ಪರೀಕ್ಷೆ ರವಾನಿಸಲಾಗಿತ್ತು. ಗುರುವಾರ ಬಂದ ವರದಿಯಲ್ಲಿ ಕೊರೋನ ಪಾಸಿಟಿವ್ ಬಂದಿತ್ತು.

ಆದರೆ ಈ ಮಗುವಿನ ಕುಟುಂಬ ಕೊರೋನ ಪೀಡಿತ ದೇಶಗಳಿಗೆ ಪ್ರಯಾಣ ಬೆಳೆಸಿರಲಿಲ್ಲ. ಮಗುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದ್ದು, ಮಗುವಿನಲ್ಲಿ ಸೋಂಕು ಕಂಡುಬಂದ ಹಿನ್ನೆಲೆಯಲ್ಲಿ ಸಂಪರ್ಕದಲ್ಲಿ ಇದ್ದ ಆರು ಮಂದಿಯನ್ನು ಹೋಂ ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ. ಅಲ್ಲದೆ ಹತ್ತಿರ ಸಂಬಂಧಿಗಳನ್ನು ತೀವ್ರ ನಿಗಾದಲ್ಲಿ ಇರಿಸಲಾಗಿದೆ.

ಇನ್ನು ಮಗುವಿನ ಸ್ವ್ಕಾಬ್ ಮತ್ತು ರಕ್ತದ ಮಾದರಿ ಮತ್ತೆ ಮರು ಪರೀಕ್ಷೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ. ಪ್ರಸ್ತುತ ಮಗುವಿನ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಮುನ್ನೆಚ್ಚರಿಕ ಕ್ರಮವಾಗಿ ಸಜಿಪನಾಡು ಗ್ರಾಮವನ್ನು ಕ್ವಾರಂಟೈನ್ ಮಾಡಲಾಗಿದೆ. ಯಾವುದೇ ವ್ಯಕ್ತಿಗಳು ಸಜಿಪನಡು ಗ್ರಾಮದಿಂದ ಹೊರಗೆ ಹಾಗೂ ಒಳಗೆ ಪ್ರವೇಶಿಸುವಂತಿಲ್ಲ ಎಂದು ಜಿಲ್ಲಾಡಳಿತ ತಿಳಿಸಿದೆ.

 

error: Content is protected !!

Join the Group

Join WhatsApp Group