(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಮಾ. 28. ದೇಶದಾದ್ಯಂತ ಲಾಕ್ ಡೌನ್ ಕಾರಣದಿಂದಾಗಿ ಬಳಕೆದಾರರಿಗೆ ಮೂರು ತಿಂಗಳುಗಳ ವಿದ್ಯುತ್ ಬಿಲ್ ವಿನಾಯಿತಿ ನೀಡುವಂತೆ ಕೇಂದ್ರ ಸರಕಾರ ಎಲ್ಲಾ ರಾಜ್ಯ ಸರಕಾರಗಳಿಗೆ ಸೂಚನೆ ನೀಡಿದೆ.

ವಿದ್ಯುತ್ ಉಚಿತವಲ್ಲದ ಕಾರಣ ಮೂರು ತಿಂಗಳ ಬಳಿಕ ವಿದ್ಯುತ್ ಬಿಲ್ ಕಟ್ಟಬೇಕು, ಮೂರು ತಿಂಗಳು ಕಳೆದು ಬಿಲ್ ಕಟ್ಟಿದವರಿಗೆ ಯಾವುದೇ ದಂಡ ವಿಧಿಸಬಾರದು ಎಂದು ಕೇಂದ್ರ ಸರಕಾರ ಸ್ಪಷ್ಟನೆ ನೀಡಿದೆ.











