ಸುಬ್ರಹ್ಮಣ್ಯ: ಅರ್ಚಕರಿಗೆ ಪೊಲೀಸ್ ಸಿಬ್ಬಂದಿಯಿಂದ ಹಲ್ಲೆ ➤ ತಪ್ಪಿತಸ್ಥ ಪೊಲೀಸ್ ಸಿಬ್ಬಂದಿ ಅಮಾನತು



(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಮಾ.29. ಪೂಜೆಗೆ ತೆರಳುತ್ತಿದ್ದ ಅರ್ಚಕರ ಮೇಲೆ ಪೊಲೀಸ್ ಸಿಬ್ಬಂದಿ ಹಲ್ಲೆ ನಡೆಸಿದ ಘಟನೆ ಸುಬ್ರಹ್ಮಣ್ಯದಲ್ಲಿ ಶನಿವಾರದಂದು ನಡೆದಿದ್ದು, ತನಿಖೆ ನಡೆಸಿರುವ ಪುತ್ತೂರು ಡಿವೈಎಸ್ಪಿಯವರ ವರದಿ ಆದರಿಸಿ ತಪ್ಪಿತಸ್ಥ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಆದೇಶಿಸಿದ್ದಾರೆ.





ಆದಿ ಸುಬ್ರಹ್ಮಣ್ಯದ ಅರ್ಚಕರಾದ ಶ್ರೀನಿವಾಸ್ ಎಂಬವರು ಶನಿವಾರ ಸಂಜೆ ಪೂಜೆಗಾಗಿ ಆದಿ ಸುಬ್ರಹ್ಮಣ್ಯಕ್ಕೆ ದೇವಳದ ಕೀ ಸಹಿತ ತೆರಳುತ್ತಿದ್ದ ವೇಳೆ ಸುಬ್ರಹ್ಮಣ್ಯ ಪೋಲೀಸ್ ಠಾಣೆಯ ಕಾನ್ಸ್‌ಟೇಬಲ್ ಶಂಕರ್ ಸಂಸಿ ಎಂಬವರು ದಾರಿಯಲ್ಲಿ ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಘಟನೆಯ ಬಗ್ಗೆ ಆಕ್ರೋಶ ಕಂಡುಬಂದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಲಕ್ಷ್ಮೀ ಪ್ರಸಾದ್ ಪುತ್ತೂರು ಪೊಲೀಸ್ ಉಪ ವಿಭಾಗಾಧಿಕಾರಿಯಿಂದ ಘಟನೆಯ ಬಗ್ಗೆ ವರದಿ ಪಡೆದು ಪರಿಶೀಲಿಸಿದ್ದು, ಮೇಲ್ನೋಟಕ್ಕೆ ಸದರಿ ಸಿಬ್ಬಂದಿಯ ದುರುವರ್ತನೆ ಕಂಡುಬಂದಿರುವ ಹಿನ್ನೆಲೆಯಲ್ಲಿ ಸದರಿ ಪೊಲೀಸ್ ಸಿಬ್ಬಂದಿಯನ್ನು ಸೇವೆಯಿಂದ ಅಮಾನತ್ತುಗೊಳಿಸಿ ಅದೇಶಿಸಿದ್ದಾರೆ.






error: Content is protected !!
Scroll to Top