ಸುಳ್ಯದಲ್ಲಿ ಐಸೋಲೇಷನ್ ವಾರ್ಡ್‌ನಲ್ಲಿದ್ದ ಓರ್ವನಲ್ಲಿ ಕೊರೋನಾ ಪತ್ತೆ..? ➤ ಮಂಗಳೂರು ಜಿಲ್ಲಾ ಆಸ್ಪತ್ರೆಗೆ ಶಿಫ್ಟ್..??

(ನ್ಯೂಸ್ ಕಡಬ) newskadaba.com ಸುಳ್ಯ, ಮಾ.31. ಜಗತ್ತನ್ನೇ ಬೆಚ್ಚಿಬೀಳಿಸಿದ್ದ ಕೊರೋನಾ ವೈರಸ್ ಇದೀಗ ಸುಳ್ಯಕ್ಕೂ ಕಾಲಿಟ್ಟಿದ್ದು, ಸುಳ್ಯ ತಾಲೂಕು ಆಸ್ಪತ್ರೆಯ ಐಸೋಲೇಷನ್ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೋರ್ವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ.

ಐಸೋಲೇಷನ್ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರ ಗಂಟಲ ದ್ರವವನ್ನು ಪರೀಕ್ಷೆಗಾಗಿ ಕಳುಹಿಸಿ ಕೊಡಲಾಗಿತ್ತು. ಇದೀಗ ಪರೀಕ್ಷೆಯ ಫಲಿತಾಂಶದ ವರದಿ ಬಂದಿದ್ದು, ಓರ್ವ ರೋಗಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಮತ್ತೋರ್ವನಿಗೆ ನೆಗೆಟಿವ್ ಇದೆ ಎನ್ನಲಾಗಿದೆ. ಪಾಸಿಟಿವ್ ಬಂದಿರುವ ವ್ಯಕ್ತಿಯನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

Also Read  ಡಿ ವರ್ಗ ಸರಕಾರಿ ನೌಕರರ ಸಂಘ ➤ನೂತನ ಅಧ್ಯಕ್ಷರಾಗಿ ಚಂದ್ರಶೇಖರ್

error: Content is protected !!
Scroll to Top