ದ.ಕ.ದಲ್ಲಿ ಮತ್ತೊಂದು ಕೊರೋನ ಪಾಸಿಟಿವ್: ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 8ಕ್ಕೆ ಏರಿಕೆ

ಮಂಗಳೂರು, ಮಾ 31: ದ.ಕ. ಜಿಲ್ಲೆಯಲ್ಲಿ ಮತ್ತೊಂದು  ಕೊರೋನ ವೈರಸ್ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 8ಕ್ಕೇರಿದೆ.

ದುಬೈನಿಂದ ಮಾ.18 ರಂದು ಭಾರತಕ್ಕೆ ಹಿಂತಿರುಗಿದ್ದ ಸುಳ್ಯ ಮೂಲದ 34 ವರ್ಷದ ವ್ಯಕ್ತಿಯಲ್ಲಿ ಕೊರೋನ ಸೋಂಕು ಲಕ್ಷಣ ಕಂಡುಬಂದ ಹಿನ್ನೆಲೆಯಲ್ಲಿ ಸ್ಥಳೀಯ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಐಸೊಲೇಶನ್ ವಾರ್ಡ್ ನಲ್ಲಿ ಇರಿಸಲಾಗಿತ್ತು. ಈತನ ಗಂಟಲಿನ ದ್ರವವನ್ನು ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದ್ದು ಮಂಗಳವಾರ ಬೆಳಗ್ಗೆ ಕೊರೋನ ಸೋಂಕು ಇರುವುದು ದೃಢಪಟ್ಟಿತ್ತು. ಈ ಹಿನ್ನಲೆಯಲ್ಲಿ ಆತನನ್ನು ಇಂದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ಮನೆಯವರನ್ನು ಕ್ವಾರಂಟೈನ್ ನಲ್ಲಿ ಇಡಲಾಗಿದೆ ಎಂದು ತಿಳಿದು ಬಂದಿದೆ.

Also Read  ರಾಜ್ಯ ಸರಕಾರಕ್ಕೆ ತಾ.ಪಂ ರದ್ದುಪಡಿಸುವ ಅಧಿಕಾರವಿಲ್ಲ...! ➤ ಸಚಿವ ಶಿವರಾಂ ಹೆಬ್ಬಾರ್

 

ರಾಜ್ಯದಲ್ಲಿ ಸೋಮವಾರ ಸಂಜೆಯಿಂದ ಮಂಗಳವಾರ ಬೆಳಗ್ಗೆ 8 ಗಂಟೆಯವರೆಗೆ ಒಟ್ಟು 10 ಪಾಸಿಟಿವ್ ಪ್ರಕರಣಗಳು ಕಂಡುಬಂದಿದೆ. ಈ ಪೈಕಿ ದ.ಕ., ಉ.ಕನ್ನಡ ಚಿಕ್ಕಬಳ್ಳಾಪುರ ಒಬ್ಬರಿಗೆ ಬೆಂಗಳೂರು ಹಾಗೂ ಮೈಸೂರಿನಲ್ಲಿ ತಲಾ ಇಬ್ಬರಲ್ಲಿ ಪತ್ತೆಯಾಗಿದೆ.

error: Content is protected !!
Scroll to Top